ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ನೂತನ ಪದಾಧಿಕಾರಿಗಳು ಜ.30 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದರು. ಬಳಿಕ ಅವರು ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಡಾ. ಹೆಗ್ಗಡೆಯವರು ನೂತನ ಕ.ಸಾ .ಪ. ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ಕಾರ್ಯಯೋಜನೆಗಳ ಬಗೆಗೆ ಸೂಕ್ತ ಸಲಹೆ, ಸೂಚನೆಗಳ ಮಾರ್ಗದರ್ಶನ ನೀಡಿದರು.
ಬಳಿಕ ಡಿ.ಹರ್ಷೇಂದ್ರ ಕುಮಾರ್ ಅವರನ್ನು ಭೇಟಿ ಮಾಡಿದರು. ಕ.ಸಾ.ಪ. ಪದಾಧಿಕಾರಿಗಳು ಜಿಲ್ಲಾಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ಅವರೊಂದಿಗೆ ಶ್ರೀ ಕ್ಷೇತ್ರದ ಮಂಜೂಷ ಮ್ಯೂಸಿಯಂ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಂಸ್ಕೃತಿ ಪ್ರತಿಷ್ಠಾನ ಗಳಿಗೆ ಭೇಟಿ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ ನ ಮಂಗಳೂರು ತಾಲೂಕು ಅಧ್ಯಕ್ಷ ಡಾ. ಮಂಜುನಾಥ ಎಸ್.ರೇವಣಕರ್, ಬೆಳ್ತಂಗಡಿ ತಾಲೂಕು ಅಧ್ಯಕ್ಷ ಡಿ.ಯದುಪತಿ ಗೌಡ, ಸುಳ್ಯ ತಾಲೂಕು ಅಧ್ಯಕ್ಷ ಚಂದ್ರಶೇಖರ ಪೇರಾಲು, ಪುತ್ತೂರು ತಾಲೂಕು ಅಧ್ಯಕ್ಷ ಉಮೇಶ್ ನಾಯಕ್, ಬಂಟ್ವಾಳ ತಾಲೂಕು ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ಕಡಬ ತಾಲೂಕು ಅಧ್ಯಕ್ಷ ಸೇಸಪ್ಪ ರೈ, ಮೂಡಬಿದ್ರಿ ತಾಲೂಕು ಅಧ್ಯಕ್ಷ ವೇಣುಗೋಪಾಲ ಶೆಟ್ಟಿ, ಮುಲ್ಕಿ ತಾಲೂಕು ಅಧ್ಯಕ್ಷೆ ಗಾಯತ್ರಿ ಎಸ್ .ಉಡುಪ, ಉಳ್ಳಾಲ ತಾಲೂಕು ಅಧ್ಯಕ್ಷ ಡಾ. ಧನಂಜಯ ಕುಂಬ್ಳೆ, ಜಿಲ್ಲಾ ಗೌರವ ಕಾರ್ಯದರ್ಶಿ ರಾಜೇಶ್ವರಿ ಎಂ, ಗೌರವ ಕೋಶಾಧ್ಯಕ್ಷ ಬಿ.ಐತಪ್ಪ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ