ಯುವ ರೆಡ್‌ ಕ್ರಾಸ್‌ ಅಧಿಕಾರಿಗಳಿಗೆ ಓರಿಯಂಟೇಶನ್‌ ಕಾರ್ಯಕ್ರಮ

Chandrashekhara Kulamarva
0

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಯುವ ರೆಡ್‌ ಕ್ರಾಸ್‌ ವತಿಯಿಂದ ವೈಆರ್‌ಸಿ ಕಾರ್ಯಕ್ರಮ ಅಧಿಕಾರಿಗಳಿಗೆ ಓರಿಯಂಟೇಶನ್‌ ಕಾರ್ಯಕ್ರಮ ಫೆಬ್ರವರಿ 21 (ಸೋಮವಾರ) ರಂದು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.


ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಮುಖ್ಯಸ್ಥ ಸಿಎ ಶಾಂತಾರಾಮ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀಧರ ಬಾಬು, ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ, ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆಯ ರಾಜ್ಯ ಶಾಖೆಯ ಪ್ರತಿನಿಧಿ ಯತೀಶ್‌ ಬೈಕಂಪಾಡಿ ಮುಖ್ಯ ಅತಿಥಿಗಳಾಗಿರಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.


ಯುವ ರೆಡ್‌ ಕ್ರಾಸ್‌ ಜಿಲ್ಲಾ ಉಪಸಮಿತಿಯ ನಿರ್ದೇಶಕ ಸಚೇತ್‌ ಸುವರ್ಣ ಮತ್ತು ಇನ್ಫೋನಾ ಟೆಕ್ನಾಲಜೀಸ್‌ ಪ್ರೈವೇಟ್‌ ಲಿಮಿಟೆಡ್‌ ನ ಐಟಿ ವಿಭಾಗದ ಕಿರಣ್‌ ಸಾಲಿಯಾನ್‌ ಸಂಪನ್ಮೂಲ ವ್ಯಕ್ತಿಗಳಾಗಿರಲಿದ್ದಾರೆ, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್‌ ಕ್ರಾಸ್‌ ನೋಡಲ್‌ ಅಧಿಕಾರಿ ಡಾ. ಗಣಪತಿ ಗೌಡ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
To Top