ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಪಣಂಬೂರು ಘಟಕ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ: 27-02-2022 ರ ಭಾನುವಾರದಂದು ಪಣಂಬೂರು ಬೀಚ್‌ನಲ್ಲಿ ಬೆಳಿಗೆ 7 ರಿಂದ 9 ರವರೆಗೆ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ನಡೆಯಲಿರುವುದು.
ಈ ಕಾರ್ಯಕ್ರಮದಲ್ಲಿ ಪಣಂಬೂರು ಘಟಕದ ಗೃಹರಕ್ಷಕ ಗೃಹರಕ್ಷಕಿಯರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆಯ ಕಾರ‍್ಯಕರ್ತರು ಭಾಗವಹಿಸುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆಯ ಮುಖ್ಯ ಪಾಲಕರು ಡಾ|| ಮುರಲೀ ಮೋಹನ್ ಚೂಂತಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ