ಪುತ್ತೂರು: ನಾವು ಹೂಡಿದ ಬಂಡವಾಳಕ್ಕೆ ಸರಿಯಾದ ಪ್ರತಿಫಲ ಸಿಗುವಂತಹ ಹೂಡಿಕೆಗಳನ್ನು ಆಯ್ದುಕೊಂಡು ನಮ್ಮ ಉಳಿತಾಯವನ್ನು ಸದ್ವಿನಿಯೋಗಿಸಬಹುದು ಎಂದು ಎನ್ & ಎನ್ ಎಸೋಸಿಯೇಟ್ಸ್ ಇದರ ಸಹ ಪ್ರವರ್ತಕರಾದ ಲಾಲ್ ಕೃಷ್ಣೇಶ ಹೇಳಿದರು. ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲಿಕಟ್ಟೆ ಇಲ್ಲಿ ಉಳಿತಾಯ ಹಾಗೂ ಹೂಡಿಕೆ ವಿಚಾರವಾಗಿ ಮಾಹಿತಿ ನೀಡುವ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಎನ್ & ಎನ್ ಎಸೋಸಿಯೇಟ್ಸ್ ಇದರ ಇನ್ನೋರ್ವ ಸಹ ಪ್ರವರ್ತಕರಾದ ವಿನೋದ್ ಕುಮಾರ್ ಅವರು ಉಳಿತಾಯದ ಬಗ್ಗೆ ಮಾತನಾಡುತ್ತಾ ನಮ್ಮ ಆದಾಯದಲ್ಲಿ ಯಾವ ರೀತಿಯಲ್ಲಿ ಉಳಿತಾಯ ಮಾಡಬಹುದು ಮತ್ತು ಉಳಿತಾಯದ ಮಹತ್ವದ ಬಗ್ಗೆ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ನಟ್ಟೋಜ ಫೌಂಡೇಶನ್ ಟ್ರಸ್ಟ್ ನ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜರು ಹಣದುಬ್ಬರದ ಬಗ್ಗೆ ತಿಳಿಸುತ್ತಾ, ನಮ್ಮ ವಿದ್ಯಾರ್ಥಿಗಳು ಉತ್ತಮ ವ್ಯವಹಾರ ಜ್ಞಾನಿಗಳಾಗಿ ಅಂಬಾನಿ, ಅದಾನಿಗಳಂತೆ ಶ್ರೇಷ್ಠ ಕೈಗಾರಿಕೋದ್ಯಮಿಗಳಾಗಿ ಭಾರತದ ಆರ್ಥಿಕ ಅಭಿವೃದ್ಧಿಯನ್ನು ಸಾಧಿಸುವುದರ ಜೊತೆಗೆ ಉಜ್ವಲ ಭವಿಷ್ಯವನ್ನು ನಿಮ್ಮದಾಗಿಸಿಕೊಳ್ಳಿ ಎಂದು ಶುಭ ಹಾರೈಸಿದರು.
ಕಾಲೇಜಿನ ಪ್ರಾಚಾರ್ಯರಾದ ಸತ್ಯಜಿತ್ ಉಪಾಧ್ಯಾಯರು, ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಅಕ್ಷತಾ ಆರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಾಣಿಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸುಶ್ಮಿತಾ ಕುಲಾಲ್ ಸ್ವಾಗತಿಸಿ, ಖುಷಿ ರೈ ವಂದಿಸಿದರು. ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಕನ್ಯಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ