ವಿವೇಕಾನಂದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ

Upayuktha
0


ಪುತ್ತೂರು: ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದಲ್ಲಿ ಪ್ರತಿಭಾ ದಿನಾಚರಣೆಯು ಸೋಮವಾರ ಕಾಲೇಜಿನ ಪ್ರಾಂಗಣದಲ್ಲಿರುವ ಕೇಶವ ಸಂಕಲ್ಪ ಸಭಾಭವನದಲ್ಲಿ ನಡೆಯಿತು.


ಕಾಲೇಜನ ಆಡಳಿತ ಮಂಡಳಿ ಸದಸ್ಯೆ ಶುಭಾ ಅಡಿಗ ಚಂಡೆವಾದನದ ಮೂಲಕ ಕಾರ್ಯಕ್ರಮವನ್ನುಉದ್ಘಾಟಿಸಿದರು. ಈ ಸಂದರ್ಭ ಕಾಲೇಜಿನ ಪ್ರಾಚಾರ್ಯ ಪ್ರೊ. ವಿಷ್ಣುಗಣಪತಿ ಭಟ್, ಕನ್ನಡ ವಿಭಾಗದ ಉಪನ್ಯಾಸಕ ಡಾ. ಮನಮೋಹನ ಎಂ., ಲಲಿತಕಲಾ ಸಂಘದ ಸಂಯೋಜಕರು ಸದಸ್ಯರು, ಉಪನ್ಯಾಸಕರು ಉಪಸ್ಥಿತರಿದ್ದರು.


ತರಗತಿವಾರು ನಡೆದ ಪ್ರತಿಭಾನ್ವೇಷಣೆ ಸ್ಪರ್ಧೆಯಲ್ಲಿ ಎಂ.ಕಾಂ ವಿಭಾಗ ಪ್ರಥಮ, ಎಂಎಸ್ಸಿ ವಿಭಾಗ ದ್ವಿತೀಯ ಹಾಗೂ ತೃತೀಯ ಬಿಕಾಂ ತರಗತಿ ತೃತೀಯ ಸ್ಥಾನಗಳನ್ನು ಪಡೆದುಕೊಂಡಿತು. ಕಾಲೇಜಿನ ಆಡಳಿತ ಮಂಡಳಿ ಸದಸ್ಯೆ ಶುಭಾ ಅಡಿಗ, ಕಾಲೇಜಿನ ಹಿರಿಯ ವಿದ್ಯಾರ್ಥಿನಿ, ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಎಂ.ಸಿ.ಎ. ವಿಭಾಗದ ಪ್ರಾಧ್ಯಾಪಕಿ ನೀಮಾ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಸುದರ್ಶನ್ ತೀರ್ಪುಗಾರರಾಗಿ ಭಾಗವಹಿದ್ದರು.

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



free website counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top