ಜಿಲ್ಲಾ ಮಟ್ಟದ ಯುವ ಸಂಸತ್ತು ಸ್ಪರ್ಧೆ

Upayuktha
0

ಉಡುಪಿ: ಕೇಂದ್ರ ಸರಕಾರದ ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಯುವ ಸಂಸತ್ತು ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಯುವ ಜನರಿಂದ ಯುವ ಸಂಸತ್ತು ಕಾರ್ಯಕ್ರಮವನ್ನು ಆಯೋಜಿಸಲು ಕೇಂದ್ರ ಸರಕಾರ ನಿರ್ಧರಿಸಿದೆ.


ಈ ಕಾರ್ಯಕ್ರಮ ನಡೆಸಲು ರಾಜ್ಯದ ಉಡುಪಿ, ಮೈಸೂರು, ಗುಲ್ಬರ್ಗ, ದಕ್ಷಿಣ ಕನ್ನಡ, ರಾಯಚೂರು ಹಾಗೂ ಕಾರವಾರ ಆಯ್ಕೆಯಾದ ನೊಡೆಲ್ ಕೇಂದ್ರಗಳು. ಉಡುಪಿ ನೊಡೆಲ್ ಕೇಂದ್ರದ ಅಡಿಯಲ್ಲಿ - ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಗಳು ಬರಲಿದ್ದು, ಆಯಾ ಜಿಲ್ಲೆಗಳಲ್ಲಿ ಭಾಗವಹಿಸುವ ಯುವ ಪ್ರತಿಭೆಗಳಿಗೆ ಆಯಾ ಜಿಲ್ಲಾ ಮಟ್ಟದಲ್ಲಿಯೇ ಸ್ಕ್ರೀನಿಂಗ್ ಮಾಡಿ ಜಿಲ್ಲೆಯಿಂದ ಆಯ್ಕೆಯಾದ ಅತ್ಯುತ್ತಮ ಅಭ್ಯರ್ಥಿಗಳನ್ನು ಉಡುಪಿಯಿಂದ ಆನ್‌ಲೈನ್ ಮೂಲಕ ಫೆಬ್ರವರಿ 23 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ತಮ್ಮ ಜಿಲ್ಲೆಗಳನ್ನು ಪ್ರತಿನಿಧಿಸುವರು.


ಪ್ರತೀ ಜಿಲ್ಲೆಯಿಂದ ಇಬ್ಬರು ಅತ್ಯುತ್ತಮ ಅಭ್ಯರ್ಥಿಗಳ ಆಯ್ಕೆಯನ್ನು ಉಡುಪಿಯಲ್ಲಿ ನಡೆಸಿ ಅವರ ಹೆಸರನ್ನು ರಾಜ್ಯ ಮಟ್ಟಕ್ಕೆ ಶಿಫಾರಸು ಮಾಡಲಾಗುವುದು. ಈ ಕಾರ್ಯಕ್ರಮವು ಜಿಲ್ಲಾ ಮಟ್ಟದಲ್ಲಿ ಕನ್ನಡ, ಹಿಂದಿ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ನಡೆಸಲಾಗುವುದು ಹಾಗೂ ರಾಷ್ಟ್ರಮಟ್ಟದಲ್ಲಿ ಹಿಂದಿ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಈ ಸ್ಪರ್ಧೆ ನಡೆಯಲಿರುವುದರಿಂದ ರಾಷ್ಟ್ರಮಟ್ಟದಲ್ಲಿ ಭಾಗವಹಿಲಿಚ್ಛಿಸುವ ಅಭ್ಯರ್ಥಿಗಳು ಇಂಗ್ಲೀಷ್ ಅಥವಾ ಹಿಂದಿ ಭಾಷೆಯಲ್ಲಿ ಸಿದ್ಧತೆ ಮಾಡಿಕೊಳ್ಳಬೇಕು.


ಕಾರ್ಯಕ್ರಮದಲ್ಲಿ ಜಿಲ್ಲೆಯ ನಿವಾಸಿಯಾಗಿರುವ, 15 ರಿಂದ 29 ವರ್ಷ ವಯೋಮಿತಿಯ ಯುವಕ ಹಾಗೂ ಯುವತಿಯರು ಮಾತ್ರ ಭಾಗವಹಿಸಲು ಅರ್ಹರಿರುವವರು. ನೂಡೆಲ್ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಗಳು ಆನ್‌ಲೈನ್ (ವರ್ಚುವಲ್) ಮೂಲಕ ನಡೆಸಲಾಗುವುದು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top