ಪುತ್ತೂರು:ವಿವೇಕಾನಂದ ಮಹಾವಿದ್ಯಾಲಯ ಪುತ್ತೂರು ಸ್ನಾತಕೋತ್ತರ ವಾಣಿಜ್ಯ ಶಾಸ್ತ್ರ ವಿಭಾಗವು 2021ರ ಆಗಸ್ಟನಲ್ಲಿ ಜರಗಿದ ವಿಶ್ವ ವಿದ್ಯಾನಿಲಯ ಮಟ್ಟದ ಎಂಕಾಂ ಸೆಮಿಸ್ಟರ್ ಪರೀಕ್ಷೆಗಳಲ್ಲಿ ಶೇಕಡಾ 100 ಫಲಿತಾಂಶ ಪಡೆದಿದೆ.
ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗವು ಆರಂಭದಿಂದ ಇಲ್ಲಿಯವರೆಗೂ ಶೇಕಡಾ 100 ಫಲಿತಾಂಶವನ್ನು ದಾಖಲಿಸುತ್ತಾ ಬಂದಿರುವುದು, ಸಂಸ್ಥೆಯಲ್ಲಿ ದೊರೆಯುತ್ತಿರುವ ಗುಣಮಟ್ಟದ ಶಿಕ್ಷಣದ ದ್ಯೋತಕವಾಗಿದೆ. ಹಲವಾರು ವಿದ್ಯಾರ್ಥಿಗಳು ಬೇರೆ ಬೇರೆ ಕಂಪೆನಿಗಳಲ್ಲಿ, ಬ್ಯಾಂಕುಗಳಲ್ಲಿ, ಸಹಕಾರಿ ಸಂಘ ಸಂಸ್ಥೆಗಳಲ್ಲಿ, ಅಧ್ಯಾಪನ ವೃತ್ತಿಯಲ್ಲಿ ಆಯ್ಕೆಯಾಗಿದ್ದು, ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಯಲ್ಲಿ ಇರುವುದು ಹೆಮ್ಮಯ ಸಂಗತಿ.
ಸ್ನಾತಕೋತ್ತರ ವಾಣಿಜ್ಯ ಶಾಸ್ತ್ರ ವಿಭಾಗವು ಉನ್ನತ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಲ್ಲಿ ವ್ಯಕಿತ್ವ ವಿಕಸನಕ್ಕೆ ಪೂರಕವಾದ ಚಟುವಟಿಕೆಗಳನ್ನೂ ನೀಡುತ್ತಾ ಬರುತ್ತಿದೆ. ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗಾಗಿ ಕೈಗಾರಿಕಾ ಕೇಂದ್ರದ, ಘಟಕಗಳ ಭೇಟಿ, ಸಂವಾದ, ಸರ್ಟಿಫಿಕೇಟ್ ಕೋರ್ಸ್, ಸ್ಪರ್ಧಾತ್ಮಕ ಪರೀಕ್ಷೆಗಳಾದ NET/SET, ವೃತ್ತಿ ಕೌಶಲ್ಯ ತರಬೇತಿಗಳನ್ನು ನೀಡುತ್ತಿದೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ವರ್ಗ, ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.