ಪತ್ರಕರ್ತ ಬಿ.ಟಿ ರಂಜನ್ ನಿಧನಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಸಂತಾಪ

Upayuktha
0


ಪುತ್ತೂರು: ಹೊಸದಿಗಂತ ಪತ್ರಿಕೆಯ ವರದಿಗಾರರು, ಹಿರಿಯ ಪತ್ರಕರ್ತರು, ಸಾಮಾಜಿಕ ಕಳಕಳಿಯುಳ್ಳವರಾದ ಬಿ. ಟಿ. ರಂಜನ್ ಅವರ ನಿಧನಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘ ಸಂತಾಪ ಸೂಚಿಸಿದೆ.


ಬಿ.ಟಿ ರಂಜನ್ ಅವರು ಪತ್ರಕರ್ತರಾಗಿದ್ದುಕೊಂಡು ಅನೇಕ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು. ಉದಯವಾಣಿ ಸೇರಿದಂತೆ ಅನೇಕ ಪತ್ರಿಕೆಗಳಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದರು. ಸಾಮಾಜಿಕ ಸುಧಾರಣೆಯ ಅನೇಕ ಪ್ರಯತ್ನಗಳಿಗೆ ಸಹಕಾರ ಮತ್ತು ಪ್ರೇರಣೆ ನೀಡಿದರು.


ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವದ ಸಾಮಾಜಿಕ ಪ್ರಕಲ್ಪವಾದ ‘ರೇಡಿಯೋ ಪಾಂಚಜನ್ಯ 90.8 FM’ ಸಮುದಾಯ ಭಾನುಲಿ ಕೇಂದ್ರ ಇದರ ಆಡಳಿತ ಸಮಿತಿಯ ಸದಸ್ಯರಾಗಿಯೂ 3 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಅವರ ಕ್ರಿಯಾಶೀಲತೆ ಯುವಪೀಳಿಗೆಗೆ ಆದರ್ಶವಾಗಲಿ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ ಕೃಷ್ಣ ಭಟ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪುತ್ತೂರಿನ ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷರಾಗಿದ್ದ ಬಿ.ಟಿ ರಂಜನ್‌ ಫೆ.5ರಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದರು. ಅವರು ಪತ್ನಿ, ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಕಳೆದ ಎರಡು ಮೂರು ದಿನಗಳಿಂದ ಶೀತ ಮತ್ತು ಕೆಮ್ಮಿನಿಂದ ಬಳಲುತ್ತಿದ್ದ ರಂಜನ್‌ ಅವರಿಗೆ ಶುಕ್ರವಾರ ಬೆಳಗ್ಗೆಯಿಂದ ತೀವ್ರ ಜ್ವರ ಕಾಣಿಸಿಕೊಂಡಿತ್ತು.  ಹಿನ್ನೆಲೆಯಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯಾಹ್ನದ ವೇಳೆಗೆ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದಾಗ ಆಂಬ್ಯುಲೆನ್ಸ್ ಮೂಲಕ ಮಂಗಳೂರಿನ ಕೆಎಂಸಿಗೆ ದಾಖಲಿಸಲಾಗಿತ್ತು.

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top