ಪುತ್ತೂರು:ಇಲ್ಲಿನ ವಿವೇಕಾನಂದ ಪದವಿ ಮಹಾವಿದ್ಯಾಲಯದ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿ, ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಸೇವಕಿ ಅರ್ಚನಾ ಇವರು ಬೆಂಗಳೂರಿನ ರಾಷ್ಟ್ರೀಯ ಸೇವಾ ಯೋಜನಾ ಪ್ರಾದೇಶಿಕ ನಿರ್ದೇಶನಾಲಯದ ಆಶ್ರಯದಲ್ಲಿ ಫೆ. 21ರಿಂದ 27ರ ವರೆಗೆ ಧಾರವಾಡದಲ್ಲಿ ನಡೆಯಲಿರುವ '25ನೇ ರಾಷ್ಟ್ರೀಯ ಯುವ ಉತ್ಸವ 2022' ರಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ.
ಇವರಿಗೆ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ