ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯಕ್ಕೆ ಒಳಪಟ್ಟ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟದ ವತಿಯಿಂದ 'ವಿದ್ಯಾಸಂಸ್ಥೆಗಳಿಗೆ ಅನ್ವಯವಾಗುವಂತೆ ಜಿ.ಎಸ್.ಟಿ' ಎಂಬ ವಿಷಯದಲ್ಲಿ ವಿಚಾರ ಸಂಕಿರಣವನ್ನು ಕೆನರಾ ಕಾಲೇಜು ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು. ಸಿ ಎ. ಕಾಲಿನ್ ರೊಡ್ರಿಗಸ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದು "ಯಾವುದೇ ರೀತಿಯಲ್ಲಿ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಗೆ ಪಾವತಿಸುವ ಶುಲ್ಕವು ತೆರಿಗೆ ವಿನಾಯಿತಿಗೆ ಒಳಪಡುತ್ತದೆ. ಈ ಸಂಬಂಧವಾಗಿ ಎಲ್ಲಾ ರೀತಿಯ ಕಾನೂನುಗಳನ್ನು ತಿಳಿಯಬೇಕಾದ ಅನಿವಾರ್ಯತೆ ಇದೆ" ಎಂದು ನುಡಿದರು.
ಕೆನರಾ ಕಾಲೇಜಿನ ಸಂಚಾಲಕ ಸಿ ಎ ಜಗನ್ನಾಥ ಕಾಮತ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಿ ಎ ಎಂ ಎನ್ ಪೈಯವರು ಅತಿಥಿಗಳನ್ನು ಪರಿಚಯಿಸಿದರು.
ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟದ ಉಪಾಧ್ಯಕ್ಷರಾದ ಪ್ರೊಫೆಸರ್ ಭಾಸ್ಕರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದು "ಎಲ್ಲ ಕಾಲೇಜುಗಳ ಆಡಳಿತ ಮಂಡಳಿಯವರು ಸಂಘಟಿತರಾಗಿ ಸೇವಾತೆರಿಗೆಯ ಬಗ್ಗೆ ತಿಳಿದು ತಡೆಯಲು ಮುಂದಾಗಬೇಕು" ಎಂದು ಹೇಳಿದರು.
ಕೆನರಾ ಕಾಲೇಜಿನ ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ ಸ್ವಾಗತಿಸಿ, ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟದ ಕಾರ್ಯದರ್ಶಿ ಪ್ರೊ. ನಾರಾಯಣ ವಂದಿಸಿದರು. ಶ್ವೇತಾ ಕಾಮತ್ ಪ್ರಾರ್ಥಿಸಿ, ಡಾ. ಕಲ್ಪನಾ ಪ್ರಭು ನಿರೂಪಿಸಿದರು. ಎಲ್ಲಾ ಕಾಲೇಜುಗಳ ಪ್ರಾಧ್ಯಾಪಕರು ಸಂವಾದದಲ್ಲಿ ಪಾಲ್ಗೊಂಡರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ