ಉಡುಪಿ: ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಫರ್ಧೆಯು ಫೆಬ್ರವರಿ 8 ಮತ್ತು 9 ರಂದು ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕ್ರೀಡಾಕೂಟವನ್ನು ಫೆಬ್ರವರಿ 8 ರಂದು ಬೆಳಗ್ಗೆ 10 ಗಂಟೆಗೆ ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ವೈ ಭಾಗವಹಿಸಲಿರುವರು.
ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರು ಆನ್‌ಲೈನ್ ಮೂಲಕ ಭಾಗವಹಿಸುವ ಕ್ರೀಡೆಯ ಕುರಿತು ಮೊದಲೇ ನಗರದ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಛೇರಿಯಲ್ಲಿ ನೋಂದಾಯಿಸಿರಬೇಕು. ಕ್ರೀಡಾಪಟುಗಳು ಆಯಾ ದಿನಕ್ಕೆ ಸಂಬಂಧಿಸಿದಂತೆ ವಿಶೇಷ ಸಾಂದರ್ಭಿಕ ರಜೆಯನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿ ಅಥವಾ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷರನ್ನು ಸಂಪರ್ಕಿಸಬಹುದಾಗಿದೆ.
ಜಿಲ್ಲೆಯ ಖಾಯಂ ಸರಕಾರಿ ನೌಕರರು ಕ್ರೀಡಾಕೂಟದಲ್ಲಿ ಭಾಗವಹಿಸುವಂತೆ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಮಣ್ಯ ಶೇರಿಗಾರ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ