ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ನಡ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ಹಾಗೂ ಶಾಲೆಯಲ್ಲಿ ಗಣಿತ ಪ್ರಯೋಗಾಲಯದ ರೂವಾರಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಯಾಕೂಬ್ ಕೊಯ್ಯೂರು ಅವರನ್ನು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಗಣಿತದಲ್ಲಿ ವಿಶೇಷ ಸೇವೆ, ಸಾಧನೆಗಾಗಿ ಗೌರವಿಸಿ ಅಭಿನಂದಿಸಿದರು.
ಗ್ರಾಮೀಣ ಪ್ರದೇಶದಿಂದ ಬಂದ ಆತ ಉಜಿರೆಯಲ್ಲಿ, ಎಸ್.ಡಿ.ಎಂ. ಕನ್ನಡ ಮಾಧ್ಯಮ ಪ್ರೌಢಶಾಲೆ ಹಾಗೂ ಎಸ್.ಡಿ.ಎಂ. ಕಾಲೇಜಿನ ಪ್ರತಿಭಾವಂತ ಹಿರಿಯ ವಿದ್ಯಾರ್ಥಿ.
ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಿ. ಸುರೇಂದ್ರಕುಮಾರ್, ಯಾಕೂಬ್ ಅವರ ಗುರು ಆರ್.ಎನ್. ಪೂವಣಿ ಉಜಿರೆ, ನಡ ಸರ್ಕಾರಿ ಪ್ರೌಢ ಶಾಲೆಯ ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಧರಣೇಂದ್ರ ಜೈನ್, ಶಿಕ್ಷಕ ಶಿವಪುತ್ರ ಸುಣಗಾರ್ ಮತ್ತು ಪುಷ್ಪರಾಜ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ