ಸೋಮವಾರದಿಂದ ಅಂತರ್ಕಾಲೇಜು ಹ್ಯಾಂಡ್‌ಬಾಲ್‌ ಪಂದ್ಯಾವಳಿ

Chandrashekhara Kulamarva
0

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ವಿಶ್ವವಿದ್ಯಾನಿಲಯ ಮಟ್ಟದ ಮಹಿಳೆಯರ ಅಂತರ್ಕಾಲೇಜು ಹ್ಯಾಂಡ್‌ಬಾಲ್‌ ಪಂದ್ಯಾವಳಿ ಫೆಬ್ರವರಿ 21 ಮತ್ತು 22ರಂದು ವಿವಿ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ.


ಪೊಲೀಸ್‌ ಉಪ ಮಹಾನಿರೀಕ್ಷಕ ಹಾಗೂ ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ಉದ್ಘಾಟನಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿರಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳವಾರ ನಡೆಯಲಿರುವ ಬಹುಮಾನ ವಿತರಣಾ ಸಮಾರಂಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಜೆರಾಲ್ಡ್‌ ಸಂತೋಷ್‌ ಡಿಸೋಜ ಮುಖ್ಯ ಅತಿಥಿಯಾಗಿರಲಿದ್ದಾರೆ.


ಮೂಲ್ಕಿಯ ವಿಜಯಾ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಸಿದ್ಧರಾಮಣ್ಣ ಗೌರವ ಅತಿಥಿಯಾಗಿರಲಿದ್ದಾರೆ. ವಿವಿ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ, ಎಂದು ಕಾಲೇಜಿನ ದೈಹಿಕ ಶಿಕ್ಷಣ ಉಪನಿರ್ದೇಶಕ ಡಾ. ಕೇಶವಮೂರ್ತಿ ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
To Top