ಪುತ್ತೂರು: ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ (Institute of Chartered accountant of India) ನಡೆಸಿದ ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ವಿವೇಕಾನಂದ ಮಹಾವಿದ್ಯಾಲಯದ ಬಿಕಾಂ ವಿದ್ಯಾರ್ಥಿಗಳಾದ ಆಕಾಶ್, ಸುಚಿತ ಭಟ್, ಪ್ರದ್ಯೋತ್‌ಕುಮಾರ್ ಬಿ, ವಿಖ್ಯಾತ್ ಶೆಟ್ಟಿ, ಗ್ರೀಷ್ಮ ಆಳ್ವ ಮತ್ತು ಸೌಮ್ಯ ಉತ್ತಮ ಅಂಕಗಳನ್ನು ಪಡೆದು ತೇರ್ಗಡೆ ಹೊಂದಿರುತ್ತಾರೆ.
ಸಿಎ ಅಂತಿಮ ಪರೀಕ್ಷೆಯಲ್ಲಿ ವಿವೇಕಾನಂದ ಮಹಾವಿದ್ಯಾಲಯದ ಮೂವರು ಹಿರಿಯ ವಿದ್ಯಾರ್ಥಿಗಳು ತೇರ್ಗಡೆಯಾಗಿರುತ್ತಾರೆ. ಕಳೆದ ಡಿಸೆಂಬರ್ 2021ರಲ್ಲಿ ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ ನಡೆಸಿದ ಸಿ ಎ ಅಂತಿಮ ಪರೀಕ್ಷೆಯಲ್ಲಿ ವಿವೇಕಾನಂದ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿಗಳಾದ ವೈಶಾಲಿ ಪ್ರಭು, ಮಧುಶ್ರೀ ಎಸ್ ದಾಸ್, ಪ್ರತೀಕ್ಷಾ ಹೆಬ್ಬಾರ್ ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿರುತ್ತಾರೆ.
ಇವರಿಗೆ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ