ಪುತ್ತೂರು: ಇತಿಹಾಸ ಪ್ರಸಿದ್ದ ದೇಯಿ ಬೈದ್ಯೆತಿ-ಕೋಟಿ ಚೆನ್ನಯರ ಮೂಲಸ್ಥಾನ ಕ್ಷೇತ್ರವಾದ ಗೆಜ್ಜೆಗಿರಿ ನಂದನ ಬಿತ್ತ್ಲ್‌ನಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಮಾ.3ರಿಂದ ಮಾ.7ರ ತನಕ ಮೂಡಬಿದ್ರೆ ಶಿವಾನಂದ ಶಾಂತಿ ಅವರ ನೇತೃತ್ವದಲಿ ವೈದಿಕ ವಿಧಿ ವಿಧಾನಗಳೊಂದಿಗೆ ನಡೆಯಲಿದೆ ಎಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ನೇಮೋತ್ಸವ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕಡೆಂಜಿ ತಿಳಿಸಿದ್ದಾರೆ.
ಅವರು ಸೋಮವಾರ ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಜಾತ್ರೋತ್ಸವದ ಅಂಗವಾಗಿ ಮಾ.೩ರಂದು ಮದ್ಯಾಹ್ನ ಪುತ್ತೂರಿನ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಂಘದ ಕಚೇರಿ ಬಳಿಯಿಂದ ಗೆಜ್ಜೆಗಿರಿ ಮೂಲಸ್ಥಾನಕ್ಕೆ ಹೊರೆ ಕಾಣಿಕೆ ಮೆರವಣಿಗೆ ನಡೆಯಲಿದೆ.
ಮಾ.೬ರಂದು ಸಂಜೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಸೋಲೂರು ಮಠದ ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ. ಶ್ರೀ ಗೆಜ್ಜೆಗಿರಿ ಕ್ಷೇತ್ರದ ಅಧ್ಯಕ್ಷ ಪೀತಾಂಬರ ಹೆರಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಸಚಿವರಾದ ವಿ. ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಸಂಜೀವ ಮಠಂದೂರು, ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್, ಮಾಜಿ ಸಚಿವರಾದ ಬಿ. ರಮಾನಾಥ ರೈ, ವಿನಯ ಕುಮಾರ್ ಸೊರಕೆ ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಗೌರವ ಅಧ್ಯಕ್ಷ ಜಯಂತ ನಡುಬೈಲು, ಅಧ್ಯಕ್ಷ ಪೀತಾಂಬರ ಹೆರಾಜೆ, ಉಪಾಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಗೆಜ್ಜೆಗಿರಿ ನೇಮೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಜನಾರ್ಧನ ಪೂಜಾರಿ ಪದಡ್ಕ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post Views: 7324