|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಸಾಪ ಕೇಂದ್ರ ಸಮಿತಿಗೆ ಡಾ. ಮಾಧವ ನಾಮನಿರ್ದೇಶನ

ಕಸಾಪ ಕೇಂದ್ರ ಸಮಿತಿಗೆ ಡಾ. ಮಾಧವ ನಾಮನಿರ್ದೇಶನ


 

ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇಲ್ಲಿನ ಕನ್ನಡ ವಿಭಾಗದ ಮುಖ್ಯಸ್ಥ, ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠ ಮತ್ತು ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದ ಸಂಯೋಜಕರೂ ಆಗಿರುವ ಡಾ. ಮಾಧವ ಎಂ.ಕೆ ಅವರನ್ನು ಕನ್ನಡ ಸಾಹಿತ್ಯ ಪರಿಷತ್ನ ಕೇಂದ್ರ ಸಮಿತಿಯ ಕಾರ್ಯಕಾರಿಣಿ ಸದಸ್ಯರಾಗಿ ನಾಮನಿರ್ದೇಶನ ಮಾಡಲಾಗಿದೆ.

 

ಡಾ. ಮಾಧವ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ನ ಕರ್ನಾಟಕ ರಾಜ್ಯ ಕಾರ್ಯದರ್ಶಿಯಾಗಿದ್ದಾರೆ. ಅಖಿಲ ಭಾರತೀಯ ಸಾಹಿತ್ಯ ಪರಿಷತ್ನ ಕರ್ನಾಟಕ ರಾಜ್ಯ ಕಾರ್ಯದರ್ಶಿಯೂ ಆಗಿರುವ ಇದರು, ಭಾರತೀಯ ಸಾಂಸ್ಕೃತಿಕ ಪರಿಷತ್ನ ಪ್ರಾದೇಶಿಕ ಸಲಹಾ ಮಂಡಳಿಯ ಸದಸ್ಯರೂ ಹೌದು. ನೂತನ ಶಿಕ್ಷಣ ಪದ್ಧತಿ (ಎನ್ಇಪಿ) ಯಡಿ ರೂಪಿಸಲಾಗಿರುವ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣದ ಕನ್ನಡ ಪಠ್ಯ ಪುಸ್ತಕಗಳ ತಜ್ಞರ ಸಮಿತಿಯ ಸದಸ್ಯತ್ವವನ್ನೂ ಹೊಂದಿದ್ದಾರೆ. ರ‍್ಯಾಂಕ್ ವಿಜೇತ ವಿದ್ಯಾರ್ಥಿ ಡಾ. ಮಾಧವ, ಹವ್ಯಾಸಿ ಯಕ್ಷಗಾನ, ನಾಟಕ ಕಲಾವಿದರಾಗಿ ರಾಜ್ಯ, ರಾಷ್ಟ್ರ ಮಟ್ಟದ ಪ್ರಶಸ್ತಿ ಪುರಸ್ಕೃತರು. 


ʼಹಿಮಗಿರಿಯ ಮಡಿಲಲ್ಲಿʼ ಪ್ರವಾಸ ಕಥನ ಸೇರಿದಂತೆ ಅನೇಕ ಕೃತಿಗಳನ್ನು ಬರೆದಿರುವ ಇವರು, ಮಂಗಳೂರು ವಿವಿಯ ಪ್ರಸಾರಾಂಗದಿಂದ ಹೊರಬರುವ ಕನ್ನಡ ಪಠ್ಯಗಳಲ್ಲಿ 30ಕ್ಕೂ ಹೆಚ್ಚು ಪುಸ್ತಕಗಳ ಸಂಪಾದಕರಾಗಿದ್ದಾರೆ.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿhit counter

0 Comments

Post a Comment

Post a Comment (0)

Previous Post Next Post