ನಿಮ್ಮ‌ ವರ್ತನೆಗಳನ್ನು ಸರಿಪಡಿಸಿಕೊಂಡು ಬನ್ನಿ, ಮತ್ತೆ ಮಾತಾಡೋಣ: ಮುಸ್ಲಿಂ ನಿಯೋಗಕ್ಕೆ ಪೇಜಾವರ ಶ್ರೀ ತಾಕೀತು

Upayuktha
0

ಉಡುಪಿ: ಪ್ರಸ್ತುತ ನಾಡಿನಲ್ಲಿ ಹಿಂದು ಮುಸ್ಲಿಂ  ಸಮುದಾಯದ ನಡುವೆ ಉಂಟಾಗಿರುವ ಕಂದಕಕ್ಕೆ ಸಂಬಂಧಿಸಿ ಸಮಸ್ಯೆ ಪರಿಹಾರ ಗೊಳಿಸಬೇಕೆಂದು ಅಪೇಕ್ಷಿಸಿ ತಮ್ಮನ್ನು ಭೇಟಿಯಾದ ಮುಸ್ಲಿಂ ನಿಯೋಗಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಒಳ್ಳೆಯ ತಿಳುವಳಿಕೆಯ ಮಾತುಗಳನ್ನು ಹೇಳಿ ಕಳುಹಿಸಿದ್ದಾರೆ.


ಈಗ ಉಂಟಾಗಿರುವ ಸಮಸ್ಯೆಗಳ ಹಿಂದೆ ಅನೇಕ ವರ್ಷಗಳ ನೋವು ಇದೆ.‌ ಅದಕ್ಕೆ ಕಾರಣ ಯಾರು ಅನ್ನೋದನ್ನು ಆತ್ಮಾವಲೋಕನ ಮಾಡಿಕೊಳ್ಳಿ. ನಿರಂತರ ಗೋ ಸಾಗಾಟ ಗೋಹತ್ಯೆ ಯಾಕೆ ನಿಂತಿಲ್ಲ?. ಜೀವನೋಪಾಯಕ್ಕೆ ಗೋವುಗಳನ್ನು ಸಾಕಿಕೊಂಡು ಬದುಕುತ್ತಿರುವವರ ಮನೆಗೆ ನುಗ್ಗಿ ಬೆದರಿಸಿ ಗೋವುಗಳನ್ನು ಹೊತ್ತೊಯ್ತಾ ಇದ್ದೀರಿ. ಅಂತಹ ಅನೇಕ ಕಾನೂನು ಬಾಹಿರವಾದ ಕೆಲಸಗಳಿಂದ ನೊಂದಿರುವ ಹಿಂದು ಸಮಾಜವನ್ನು ಬಿಟ್ಟು ಶಾಂತಿ ಸೌಹಾರ್ದದ ಮಾತುಕತೆ ಅಥವಾ ಪರಿಹಾರ ನನ್ನೊಬ್ಬನಿಂದ ಸಾಧ್ಯವಿಲ್ಲ. 


ಈಗ ಉಂಟಾಗಿರುವ ಪರಿಸ್ಥಿತಿಗೆ ಮೂಲ ಕಾರಣ ಯಾರು??

ಸಮಾಜದಲ್ಲಿ ಕಾನೂನು ಶಾಂತಿ ನೆಮ್ಮದಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ರೀತಿಗಳ ಬಗ್ಗೆ ಆತ್ಮಾವಲೋಕನ‌ ಮಾಡಿಕೊಂಡು ಬನ್ನಿ; ಮತ್ತೆ ಮಾತಾಡೋಣ ಎಂದು ಶ್ರೀಗಳು ಮುಸ್ಲಿಂ ನಿಯೋಗಕ್ಕೆ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಮಠದ ಪ್ರಕಟಣೆ ತಿಳಿಸಿದೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



hit counter

Post a Comment

0 Comments
Post a Comment (0)
Advt Slider:
To Top