ಪಂಚರಾಜ್ಯ ಚುನಾವಣಾ ಫಲಿತಾಂಶ ಕಾಂಗ್ರೆಸ್ ಶವಪೆಟ್ಟಿಗೆಯ ಕೊನೆಯ ಮೊಳೆ: ಶಾಸಕ ಕಾಮತ್

Upayuktha
0

ಮಂಗಳೂರು: ಪಂಚ‌ರಾಜ್ಯ ಚುನಾವಣೆಯ ಫಲಿತಾಂಶವು ಬಿಜೆಪಿಯ ಅಭಿವೃದ್ಧಿ, ಸಧೃಡ ನಾಯಕತ್ವಕ್ಕೆ ಸಂದ ಗೆಲುವು. ಪಂಜಾಬ್ ಹೊರತುಪಡಿಸಿ ಉಳಿದ 4 ರಾಜ್ಯಗಳಲ್ಲಿ ಬಿಜೆಪಿ ಮತ್ತೆ ಆಡಳಿತಕ್ಕೇರುವ ಮೂಲಕ ದೇಶದ ಜನರಿಗೆ ಬಿಜೆಪಿಯ ಆಡಳಿತವನ್ನು ಮೆಚ್ಚಿಕೊಂಡಿದ್ದಾರೆ ಎನ್ನುವುದು ಸಾಬೀತಾಗಿದೆ ಎಂದು ಶಾಸಕ‌ ಕಾಮತ್ ಹೇಳಿದ್ದಾರೆ. 


4 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳುವ ಮೂಲಕ ಜನಾಶಿರ್ವಾದ ಪಡೆದಿದೆ. ಅವ್ಯಾಹತವಾಗಿ ಅಪಪ್ರಚಾರ ಮಾಡಿದ ಕಾಂಗ್ರೇಸ್ ಪಕ್ಷವು ಜನರಿಂದ ತಿರಸ್ಕೃತಗೊಂಡು ಮೂಲೆ ಗುಂಪಾಗಿದೆ. ಈ ಪಂಚ ರಾಜ್ಯ ಚುನಾವಣೆಯಲ್ಲಿ ಜನತೆ ಕಾಂಗ್ರೇಸ್ ಶವಪೆಟ್ಟಿಗೆಗೆ ಕೊನೆಯ ಮೊಳೆ ಹೊಡೆದಿದ್ದಾರೆ.


ಪ್ರಧಾನ ಮಂತ್ರಿ ನರೇಂದ್ರ ಮೋದಿಜೀ ಅವರ ಆಡಳಿತ ವೈಖರಿಯನ್ನು ಮೆಚ್ಚಿ ಮತ ನೀಡಿದ ಪ್ರತಿಯೊಬ್ಬ ಮತದಾರ ಪ್ರಭುವಿಗೂ ಧನ್ಯವಾದಗಳು ಹಾಗೂ ಗೆದ್ದು ಜನರ ಸೇವೆಗೆ ಆಯ್ಕೆಯಾದ ಎಲ್ಲಾ ಶಾಸಕರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ




hit counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top