ಮಂಗಳೂರು: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಡಾ. ಸಂತೋಷ್ ಜೀ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಮತ್ತು ರಾಜ್ಯಾರ್ಧಯಕ್ಷ ನಳಿನ್ ಕುಮಾರ್ ಕಟೀಲು ಅವರು ಗೋವಾ ವಿಧಾನಸಭಾ ಚುನಾವಣೆಯಲ್ಲಿ ಪಣಜಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರದ ಉಸ್ತುವಾರಿಯನ್ನು ಕೊಟ್ಟಿದ್ದರು. ಅದರಂತೆ ಮಂಗಳೂರು ದಕ್ಷಿಣ ಕ್ಷೇತ್ರೆದ ಶಾಕಸ ಡಿ ವೇದವ್ಯಾಸ ಕಾಮತ್ ಅವರು ಅಲ್ಲಿ ಸುಮಾರು 15 ದಿನಗಳ ಕಾಲ ಪ್ರಚಾರ ನಡೆಸಿದ್ದರು.
ಇವತ್ತು ಬಿಜೆಪಿ ಅಭ್ಯರ್ಥಿ ಅಲ್ಲಿ ಗೆದ್ದಿದ್ದಾರೆ. ಈ ಗೆಲುವು ನನಗೂ ಖುಷಿಯನ್ನು ಕೊಟ್ಟಿದೆ. ನನಗೆ ಜವಾಬ್ದಾರಿ ಕೊಟ್ಟ ಹಿನ್ನೆಲೆಯಲ್ಲಿ ಒಬ್ಬ ಕಾರ್ಯಕರ್ತನಾಗಿ ಅಲ್ಲಿ ಪಕ್ಷದ ಸೇವೆ ಮಾಡಿದ್ದೇನೆ. ಅಲ್ಲಿನ ಜನರು ನೀಡಿದ ಆಶೀರ್ವಾದಕ್ಕೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ.
ವಿಜಯಿಯಾದ ಗೌರವಾನ್ವಿತ ಅಭ್ಯರ್ಥಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇನೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ