ಮಂಗಳೂರು: ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳು ಹಾಗೂ ಸ್ನಾತಕೋತ್ತರ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಮಾಡಿರುವುದನ್ನು ಮಂಗಳೂರು ವಿಶ್ವವಿದ್ಯಾನಿಲಯ ಅತಿಥಿ ಉಪನ್ಯಾಸಕರ ಸಂಘ ಸ್ವಾಗತಿಸಿದೆ.
ಈ ಕುರಿತು ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ, ಸಂಘದ ಪದಾಧಿಕಾರಿಗಳು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳು, ಕುಲಸಚಿವರು, ಹಣಕಾಸು ಅಧಿಕಾರಿ ಸೇರಿದಂತೆ ಅಧಿಕಾರಿ ವರ್ಗ, ಸಮಸ್ತ ಸಿಂಡಿಕೇಟ್ ಸದಸ್ಯರು ಹಾಗೂ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಸಂಬಂಧ ರಚಿಸಲಾಗಿದ್ದ ಸಮಿತಿಯ ಅಧ್ಯಕ್ಷ, ಸಿಂಡಿಕೇಟ್ ಸದಸ್ಯ ರಮೇಶ್ ಕೆ ಅವರ ವಿಶೇಷ ಪ್ರಯತ್ನಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
ಪ್ರಸ್ತುತ ಯುಜಿಸಿ ವಿದ್ಯಾರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕರೂ. 40,000 ಹಾಗೂ ಯುಜಿಸಿ ವಿದ್ಯಾರ್ಹತೆ ಹೊಂದಿರದ ಅತಿಥಿ ಉಪನ್ಯಾಸಕರಿಗೆ ರೂ. 35,000 ವೇತನ ನಿಗದಿಪಡಿಸಲಾಗಿದೆ. ಫೆಬ್ರವರಿಯಿಂದ ಜಾರಿಗೆ ಬರುವಂತೆ ಈ ಹಿಂದಿನ ವೇತನಕ್ಕಿಂದ ಸರಾಸರಿ 10 ರಿಂದ 15 ಸಾವಿರ ರೂಪಾಯಿ ಹೆಚ್ಚಳ ಮಾಡಲಾಗಿದೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ