ಪುತ್ತೂರು ಮಾ.11: ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರ ಮತ್ತು ಭಾರತೀಯ ಸಂಸ್ಕೃತಿ ಮತ್ತು ಲಲಿತಕಲೆಗಳ ಅಧ್ಯಯನ ಕೇಂದ್ರಗಳ ಉದ್ಘಾಟನೆ ಮತ್ತು ಸನ್ಮಾನ ಸಮಾರಂಭವು ಪುತ್ತೂರಿನ ನೆಹರುನಗರದಲ್ಲಿರುವ ವಿವೇಕಾನಂದ ಕಾಲೇಜಿನ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಮಾ.12ರಂದು ಪೂರ್ವಾಹ್ನ 10 ಗಂಟೆಯಿಂದ ನಡೆಯಲಿದೆ. ವಿಶ್ರಾಂತ ಪ್ರಾಧ್ಯಾಪಕ ಹಾಗೂ ಕಲಾವಿದರಾದ ಡಾ. ಪ್ರಭಾಕರ ಜೋಷಿ ಉದ್ಘಾಟಿಸಲಿರುವರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ, ಸಂಚಾಲಕ ಮುರಳಿಕೃಷ್ಣ ಹಾಗೂ ದೇರಾಜೆ ಸೀತಾರಾಮಯ್ಯ ಅವರ ಪುತ್ರ, ರಂಗನಟ ಮೂರ್ತಿ ದೇರಾಜೆ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಕುರಿಯ ಗಣಪತಿ ಶಾಸ್ತ್ರಿ, ಸಂಗೀತ ಗುರುಗಳು ಹಾಗೂ ಸುನಾದ ಸಂಗೀತ ಕಲಾಶಾಲೆಯ ಮುಖ್ಯಸ್ಥ ವಿದ್ವಾನ್ ಕಾಂಚನ ಈಶ್ವರ ಭಟ್ ಹಾಗೂ ಪುತ್ತೂರು ವೈಷ್ಣವಿ ನಾಟ್ಯಾಲಯ(ರಿ) ಇದರ ನೃತ್ಯಗುರು ವಿದುಷಿ ಯೋಗೀಶ್ವರಿ ಅವರನ್ನು ಸನ್ಮಾನಿಸಲಾಗುವುದು. ಸಬಾ ಕಾರ್ಯಕ್ರಮದ ನಂತರದಲ್ಲಿ ‘ಕೃಷ್ಣ ಸಂಧಾನ’ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ನಡೆಯಲಿದೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ