ಮಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿ ಜಿಲ್ಲೆಯ ವಿವಿಧ ಸಾಹಿತಿಗಳನ್ನು ಮತ್ತು ಗಣ್ಯರ ಜೊತೆ ಮಾತುಕತೆ ನಡೆಸಿದರು.
ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವರನ್ನು ಭೇಟಿ ಮಾಡಿ ಮಾತುಕತೆ ನಡಸಿ ಕನ್ನಡ ಸಾಹಿತ್ಯ ಪರಿಷತ್ತಿಗೆ ಸಹಕಾರ ನೀಡುವಂತೆ ಮನವಿ ಮಾಡಿದರು.
ಕನ್ನಡ ಸಂಘದ ಕಾರ್ಯಚಟುವಟಿಕೆ ಬಗ್ಗೆ ಕಾಂತಾವರ ಕನ್ನಡ ಸಂಘದ ಅಧ್ಯಕ್ಷ ಡಾ. ನಾ. ಮೊಗಸಾಲೆ ಮೆಚ್ಚುಗೆ ವ್ಯಕ್ತಪಡಿಸಿದರು.
ಹಿರಿಯ ಸಾಹಿತಿ ಡಾ. ಜನಾರ್ಧನ ಭಟ್ ಅವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಿಗೆ ಕೃತಿಗಳನ್ನು ನೀಡಿ ಗೌರವಿಸಲಾಯಿತು.
ಜಿಲ್ಲೆಯ ಹಿರಿಯ ಸಾಹಿತಿ ಪ್ರೊ ಬಿ.ಎ. ವಿವೇಕ್ ರೈ ಅವರನ್ನು ಭೇಟಿಯಾಗಿ ಸಾಹಿತ್ಯ ಪರಿಷತ್ತು ಮುಂದಿನ ದಿನಗಳಲ್ಲಿ ಮಾಡಬೇಕಾದ ಚಟುವಟಿಕೆಗಳ ಬಗ್ಗೆ ಮಹೇಳ್ ಜೋಶಿ ಸಮಾಲೋಚಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ ಶ್ರೀನಾಥ್ ಮತ್ತು ಉಡುಪಿ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಈ ವೇಳೆ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ