ಮೂಡುಬಿದಿರೆ: ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗ ವತಿಯಿಂದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಕಾಲೇಜು ವಿದ್ಯಾರ್ಥಿಗಳಿಗೆ ಮಾ.19ರಂದು ಕನ್ನಡ ರಸಪ್ರಶ್ನೆ ಸ್ಪರ್ಧೆ ನಡೆಯಲಿದೆ.
ಪ್ರಚಲಿತ ವಿದ್ಯಮಾನ, ಸಾಮಾನ್ಯ ಜ್ಞಾನ, ಭಾರತೀಯ ಸಂಸ್ಕೃತಿ, ಇತಿಹಾಸ, ರಾಜಕೀಯ ವಿದ್ಯಮಾನ, ದೇಶದ ಮಹಾನ್ ಸಾಧಕರ ಕುರಿತು ಪ್ರಶ್ನೆಗಳು ಇರಲಿವೆ. ಸ್ಪರ್ಧೆಗೆ ಮಂಗಳೂರು ವಿವಿ ಅಧೀನಕ್ಕೆ ಒಳಪಡುವ ಎಲ್ಲ ಖಾಸಗಿ ಹಾಗೂ ಸ್ವಾಯತ್ತ ಕಾಲೇಜಿನಿಂದ ತಲಾ ಇಬ್ಬರು ವಿದ್ಯಾರ್ಥಿಗಳನ್ನೊಳಗೊಂಡ ಎರಡು ತಂಡಗಳನ್ನು ಕಳುಹಿಸಬಹುದು.
ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದವರಿಗೆ ನಗದು ಬಹುಮಾನ ನೀಡಲಾಗುವುದು. ಭಾಗವಹಿಸುವವರಿಗೆ ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ. ಸ್ಪರ್ಧೆಗೆ ನೋಂದಾಯಿಸಲು ಮಾ.15 ಕೊನೆಯ ದಿನಾಂಕ. ಹೆಚ್ಚಿನ ಮಾಹಿತಿಗೆ ದೂ. 9448369267 ಅಥವಾ 8050627181 ಸಂಪರ್ಕಿಸಬಹುದು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ