
ಬದಿಯಡ್ಕ: ಮವ್ವಾರು ಶ್ರೀ ವಿಶ್ವಕರ್ಮ ಕಾಳಿಕಾಂಬಾ ಭಜನಾ ಮಂದಿರದ 21ನೇ ವಾರ್ಷಿಕೋತ್ಸವವು ಬ್ರಹ್ಮಶ್ರೀ ಪುರೋಹಿತ ರತ್ನ ಬಿ.ಕೇಶವ ಆಚಾರ್ಯ ಉಳಿಯತ್ತಡ್ಕ ಅವರ ನೇತೃತ್ವದಲ್ಲಿ ಮಾರ್ಚ್ 26 ಶನಿವಾರದಂದು ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಇದರ ಅಂಗವಾಗಿ ಅಂದು ಬೆಳಿಗ್ಗೆ 6.36ಕ್ಕೆ ದೀಪ ಪ್ರತಿಷ್ಠೆ, 8 ಗಂಟೆಗೆ ಗಣಪತಿ ಹವನ, ಬೆಳಿಗ್ಗೆ 11.30ರಿಂದ ಅರವಿಂದ ಆಚಾರ್ಯ ಮಾಣಿಲ ಅವರಿಂದ ದಾಸ ಸಂಕೀರ್ತನೆ, ಮಧ್ಯಾಹ್ನ 12.30ಕ್ಕೆ ಶ್ರೀವಿಶ್ವಕರ್ಮ ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ 6.30ಕ್ಕೆ ದೀಪ ಪ್ರಜ್ವಲನೆ, ರಾತ್ರಿ 7ಗಂಟೆಯಿಂದ ವಿವಿಧ ಭಜನಾ ಸಂಘಗಳಿಂದ ಭಜನೆ, ರಾತ್ರಿ 9.30ಕ್ಕೆ ಮಹಾಮಂಗಳಾರತಿಯೊಂದಿಗೆ ಸಂಪನ್ನಗೊಳ್ಳಲಿದೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ