ಪುತ್ತೂರು: ಪ್ರತಿಭೆ ಎಂಬುದು ಪ್ರತಿಯೊಬ್ಬರಲ್ಲಿಯೂ ಇರುತ್ತದೆ. ಇದರ ಗುರುತಿಸುವ ಹಾಗೂ ಪ್ರೋತ್ಸಾಹಿಸುವ ಕಾರ್ಯವಾಗಬೇಕು. ವ್ಯಂಗಚಿತ್ರಕಲೆಯನ್ನು ಶ್ರದ್ಧೆಯಿಂದ ಕರಗತ ಮಾಡಿಸಿಕೊಂಡು ಈ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಖ್ಯಾತ ವ್ಯಂಗ್ಯಚಿತ್ರಕಾರ ವೆಂಕಟ್ ಭಟ್ ಎಡನೀರು ಹೇಳಿದರು.
ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದಲ್ಲಿ ಎನ್.ಜಿ. ಪಾವಂಜೆ ಲಲಿತಕಲಾ ಪೀಠ ಮಂಗಳೂರು ವಿಶ್ವವಿದ್ಯಾಲಯ ಮತ್ತು ಐಕ್ಯೂಎಸಿ ಇದರ ಸಹಯೋಗದಲ್ಲಿ ಆಯೋಜಿಸಿದ ಒಂದು ದಿನದ ವ್ಯಂಗ್ಯಚಿತ್ರ ಕಾರ್ಯಾಗಾರವನ್ನು ಉದ್ಘಾಟಸಿ ಶುಕ್ರವಾರ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ಮಾತನಾಡಿ, ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮವು ನಡೆಸಲಾಗುತ್ತದೆ. ಇಂತಹ ಕಾರ್ಯಾಗಾರದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಮತ್ತಷ್ಟು ಪಕ್ವಗೊಳಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಖ್ಯಾತ ವ್ಯಂಗ್ಯಚಿತ್ರಕಾರರಾದ ಜೀವನ್ ಶೆಟ್ಟಿ ಹಾಗೂ ಹರಿಶ್ಚಂದ್ರ ಶೆಟ್ಟಿ (ಹರಿಣಿ), ಐಕ್ಯೂಎಸಿ ಸಂಯೋಜಕ ಶಿವಪ್ರಸಾದ್ ಕೆ ಎಸ್, ಕನ್ನಡ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ಹೆಚ್ ಜಿ ಹಾಗೂ ವಿವಿಧ ಕಾಲೇಜಿನ ಆಸಕ್ತ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಎನ್.ಜಿ. ಪಾವಂಜೆ ಲಲಿತಕಲಾ ಪೀಠದ ನಿರ್ದೇಶಕ ಡಾ. ಶ್ರೀಪತಿ ಕಲ್ಲೂರಾಯ ಸ್ವಾಗತಿಸಿ, ಪ್ರಾಸ್ತಾವನೆಗೈದರು. ಭೌತಶಾಸ್ತ್ರ ವಿಭಾಗದ ಉಪನ್ಯಾಸಕರಾದ ವರ್ಷಾ ಮೊಳೆಯಾರ್ ವಂದಿಸಿ, ದೀಕ್ಷಿತ್ ಕೆ. ಜೆ. ಕಾರ್ಯಕ್ರಮ ನಿರೂಪಿಸಿದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ