|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿವೇಕಾನಂದ ಕಾಲೇಜಿನಲ್ಲಿ ಹೆತ್ತವರೊಂದಿಗೆ ಸಂವಾದ ಕಾರ್ಯಕ್ರಮ

ವಿವೇಕಾನಂದ ಕಾಲೇಜಿನಲ್ಲಿ ಹೆತ್ತವರೊಂದಿಗೆ ಸಂವಾದ ಕಾರ್ಯಕ್ರಮ

ಹೆತ್ತವರು ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡುವ ಕಾರ್ಯವನ್ನು ಮಾಡಬೇಕು: ಡಾ. ಶ್ರೀಪತಿ ಕಲ್ಲೂರಾಯ


ಪುತ್ತೂರು.ಮಾ. 15: ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಸ್ಫರ್ಧಾತ್ಮಕ ವಾತಾವರಣವನ್ನು ಎದುರಿಸುವ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಸ್ಫರ್ಧಾತ್ಮಕ ಜಗತ್ತನ್ನು ಎದುರಿಸಲು ವಿದ್ಯಾರ್ಥಿಗಳು ಸಮರ್ಥರಾಗಬೇಕು. ವಿದ್ಯಾರ್ಥಿಗಳ ಸಾಧನೆಯ ಹಾದಿಯಲ್ಲಿ ಹಲವು ಅಡಚನೆಗಳು ಎದುರಾಗುತ್ತದೆ. ಇಂತಹ ಸಂದರ್ಭದಲ್ಲಿ ಶಿಕ್ಷಕರ ಜೊತೆಗೆ ಹೆತ್ತವರು ಕೂಡ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡುವ ಕಾರ್ಯವನ್ನು ಮಾಡಬೇಕು ಎಂದು ಇಲ್ಲಿನ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ ಹೇಳಿದರು.


ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ರಕ್ಷಕ ಶಿಕ್ಷಕ ಸಂಘ ಮತ್ತು ಐಕ್ಯೂಎಸಿ ಘಟಕದ ಆಶ್ರಯದಲ್ಲಿ ನಡೆದ ‘ಹೆತ್ತವರೊಂದಿಗೆ ಸಂವಾದ ಕಾರ್ಯಕ್ರಮ’ದಲ್ಲಿ ಭಾಗವಹಿಸಿ ಮಂಗಳವಾರ ಅವರು ಮಾತನಾಡಿದರು.


ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ ಎನ್. ಮಾತನಾಡಿ, ವಿದ್ಯಾಸಂಸ್ಥೆಯು ವಿದ್ಯಾರ್ಜನೆಗೆ ಪೂರಕವಾಗುವ ವಾತಾವರಣವನ್ನು ಸೃಷ್ಟಿಸುತ್ತಾ ಬಂದಿದೆ. ವಿದ್ಯಾರ್ಥಿಗಳ ವಿಕಸನದ ದೃಷ್ಟಿಯಿಂದ ಕಾಲೇಜಿನಲ್ಲಿ ದಿನನಿತ್ಯ ಹಲವು ಬಗೆಯ ಕಾರ್ಯಕ್ರಮಗಳು ನಡೆಯುತ್ತಿದೆ. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಭವಿಷ್ಯವನ್ನುರೂಪಿಸಲು ಸಹಕರಿಸುತ್ತದೆ. ಹೆತ್ತವರು ವಿದ್ಯಾರ್ಥಿಗಳ ಪೂರ್ಣ ಜವಾಬ್ದಾರಿಯನ್ನು ಕಾಲೇಜಿಗೆ ಒಪ್ಪಿಸದೇ, ಅವರ ಕಾರ್ಯವೈಖರಿ ಹಾಗೂ ದಿನಚರಿಯನ್ನು ಗಮನಿಸಬೇಕು. ವಿದ್ಯಾರ್ಥಿಗಳನ್ನು ಸಮಾಜದ ಯೋಗ್ಯವಾದ ವ್ಯಕ್ತಿಗಳನ್ನಾಗಿ ನಿರ್ಮಿಸುವುದಕ್ಕಾಗಿ ಕಾಲೇಜು ನಿಯಮಗಳನ್ನು ರೂಪಿಸುತ್ತದೆ. ಕಾಲೇಜಿನ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎನ್ನುವ ಅರಿವನ್ನು ಮೂಡಿಸುವ ಕಾರ್ಯ ಪೋಷಕರಿಂದಾಗಬೇಕು ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಶಿವರಾಮ ಭಟ್ ಮಾತನಾಡಿ, ಸನಾತನ ಧರ್ಮದ ಆಶಯಗಳನ್ನು ಉಳಿಸುವ ನಿಟ್ಟಿನಲ್ಲಿ ವಿದ್ಯಾಸಂಸ್ಥೆಯ ನಿರ್ಮಾಣವಾಗಿದೆ. ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣವನ್ನು ನೀಡುವುದರ ಮುಖೇನ ಸತ್ಪ್ರಜೆಗಳನ್ನು ರೂಪಿಸುವುದು ಈ ವಿದ್ಯಾಸಂಸ್ಥೆಯ ಉದ್ದೇಶವಾಗಿದೆ. ವಿದ್ಯಾರ್ಥಿಗಳ ಕಾರ್ಯವೈಖರಿಯ ಬಗೆಗೆ ಪೋಷಕರು ಗಮನ ಹರಿಸಬೇಕು. ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಪೋಷಕರು, ಶಿಕ್ಷಕರೊಂದಿಗೆ ವಿಚಾರಿಸುತ್ತಿರಬೇಕು ಎಂದು ಅಭಿಪ್ರಾಯಪಟ್ಟರು.


ವೇದಿಕೆಯಲ್ಲಿ ಕಾಲೇಜಿನ ಐಕ್ಯೂಎಸಿ ಸಂಯೋಜಕ ಶಿವಪ್ರಸಾದ್ ಕೆ ಎಸ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶಪಾಲ ಪ್ರೊ. ವಿಷ್ಣುಗಣಪತಿ ಭಟ್ ಪ್ರಸ್ತಾವನೆಗೈದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ.ರವಿಕಲಾ ಸ್ವಾಗತಿಸಿ, ರಕ್ಷಕ ಶಿಕ್ಷಕ ಸಂಘದ ಕಾರ್ಯದರ್ಶಿ ಮತ್ತುಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ನಾಯಕ್ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕ ಮುಕುಂದಕೃಷ್ಣ ಕಾರ್ಯಕ್ರಮ ನಿರೂಪಿಸಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم