ಸ್ಪರ್ಧಾತ್ಮಕ ಜಗತ್ತನ್ನು ಎದುರಿಸಲು ವಿದ್ಯಾರ್ಥಿಗಳು ಸಿದ್ಧರಾಗಬೇಕು: ಮೇಘ ಆರ್. ಸಾನಾಡಿ

Upayuktha
0

ಪುತ್ತೂರು: ಯಾವುದೇ ಉದ್ಯೋಗ ಕ್ಷೇತ್ರದಲ್ಲಿ ಸವಾಲುಗಳು, ಅಡೆತಡೆಗಳು ಎದುರಾಗುವುದು ಸಾಮಾನ್ಯ. ಎಷ್ಟೇ ಸವಾಲುಗಳು ಎದುರಾದರೂ ಇಟ್ಟ ಹೆಜ್ಜೆಯನ್ನು ಹಿಂದೆಗೆಯಬಾರದು. ಯಾವುದೇ ಸಂದರ್ಭದಲ್ಲಿ ಧೈರ್ಯದಿಂದ ಹೊಸ ವಿಷಯಗಳನ್ನು ಕಲಿಯುತ್ತಾ ಮುನ್ನಡೆಯಬೇಕು ಎಂದು ಇಲ್ಲಿನ ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಮತ್ತು ಹೊಸದಿಗಂತ ಪತ್ರಿಕೆಯ ವರದಿಗಾರ್ತಿ ಮೇಘ ಆರ್ ಸಾನಾಡಿ ಹೇಳಿದರು.


ಅವರು ಸೋಮವಾರ ಕಾಲೇಜಿನ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ ಆಯೋಜಿಸಲಾದ ಪತ್ರಕರ್ತ ಮೇಷ್ಟ್ರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.


ಈ ಸಂದರ್ಭದಲ್ಲಿ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ತಾರಾ ಮಾತನಾಡಿ ಶುಭ ಹಾರೈಸಿದರು.


ವೇದಿಕೆಯಲ್ಲಿ ಎಂಸಿಜೆ ವಿಭಾಗದ ವಿದ್ಯಾರ್ಥಿ ಜಗದೀಶ್ ಜೆ ಉಪಸ್ಥಿತರಿದ್ದರು. ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕರಾದ ಭವಿಷ್ಯ ಶೆಟ್ಟಿ, ಸೀಮಾ ಪೋನಡ್ಕ, ಭರತ್ ಕುಮಾರ್ ಕೆ. ಬಿ, ಉಪಸ್ಥಿತರಿದ್ದರು.


ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿನಿ ದಿವ್ಯಶ್ರೀ ವಜ್ರದುಂಬಿ ಸ್ವಾಗತಿಸಿ, ರಮ್ಯಶ್ರೀ ವಂದಿಸಿದರು. ದ್ವಿತೀಯ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿನಿ ದೀಕ್ಷಿತಾ ಜೇಡರಕೊಡಿ ಕಾರ್ಯಕ್ರಮ ನಿರೂಪಿಸಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top