ಪುಂಜಾಲಕಟ್ಟೆ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸೋಮವಾರ (ಮಾ.7) IQAC ಅಡಿಯಲ್ಲಿ ರಾಜ್ಯಶಾಸ್ತ್ರ ವಿಭಾಗ ಮತ್ತು ಟೀಮ್ ಅಶ್ರಯ ಇವರ ಸಹಯೋಗದೊಂದಿಗೆ ಅಂತರಾಷ್ಟ್ರಿಯ ಮಹಿಳಾ ದಿನದ ಪ್ರಯುಕ್ತ “ಲಿಂಗ ಸಮಾನತೆ ಮತ್ತು ತೃತೀಯ ಲಿಂಗಿಗಳ ಹಕ್ಕುಗಳ' ಕಾರ್ಯಾಗಾರನ್ನು ಹಮ್ಮಿಕೊಳ್ಳಲಾಗಿತ್ತು.
ದೇಶದಲ್ಲಿ ತೃತೀಯ ಲಿಂಗಿಗಳ ಮೇಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ದೌರ್ಜನ್ಯ ಹಾಗೂ ಅವರು ಸಮಾಜದಲ್ಲಿ ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಅವರ ಹಕ್ಕುಗಳ ಕುರಿತು ವಿದ್ಯಾರ್ಥಿಗಳಿಗೆ ಟೀಮ್ ಆಶ್ರಯ ಸಂಸ್ಥೆಯ ಮಹಮ್ಮದ್ ಸುಹೇಬ್‌ರವರು ಮಾಹಿತಿ ನೀಡಿದರು.
ರಾಜ್ಯಶಾಸ್ತ್ರದ ಉಪನ್ಯಾಸಕರಾದ ಪ್ರೊ. ಶೇಖರ್, ಇವರು ಪ್ರಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ. ಟಿ.ಕೆ.ಶರತ್ ಕುಮಾರ್ ರವರು ವಹಿಸಿದ್ದರು. ಅಧ್ಯಕ್ಷೀಯ ಭಾಷಣ ಮಾಡಿದ ಅವರು ತೃತೀಯ ಲಿಂಗಿಗಳ ಮತ್ತು ಮಹಿಳೆಯರ ಹಕ್ಕುಗಳ ಬಗ್ಗೆ ಪ್ರತಿಯೊಬ್ಬರು ಅರಿಯಬೇಕು ಮತ್ತು ಅವರನ್ನು ಗೌರವಿಸಬೇಕು ಮತ್ತು ತಮ್ಮ ಮನೆಯ ಮಗಳಂತೆ ನೊಡಿಕೊಳ್ಳಬೇಕು ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ರಾಜ್ಯಶಾಸ್ತ್ರದ ಉಪನ್ಯಾಸಕಿಯಾದ ಒಲಿಂಡ ಗೊಂನ್ಸಾಲ್ವಿಸ್, ಕನ್ನಡ ಉಪನ್ಯಾಸಕರಾದ ಕೃಷ್ಣಾನಂದ್ ಪಿ ಹಾಗೂ ಇತರ ಉಪನ್ಯಾಸಕ ವೃಂದದವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವಿನುತಾ ಸ್ವಾಗತಿಸಿದರು, ಅಶ್ವಿನಿ ವಂದಿಸಿದರು, ರಾಫಿಯಾ ನಿರೂಪಿಸಿದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ