ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ವಿಭಾಗದ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಆಯೋಜಿಸಿದ "ಪರೀಕ್ಷೆಯ ಸುತ್ತಮುತ್ತ" ಎನ್ನುವ ಕಾರ್ಯಾಗಾರವನ್ನು ಉಜಿರೆಯ ಎಸ್.ಡಿ.ಎಂ ಪದವಿ ಕಾಲೇಜಿನ ಮನಃಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಸುಧೀರ್ ಕೆ.ವಿ ಇವರು ನಡೆಸಿಕೊಟ್ಟರು. ಪರೀಕ್ಷೆಯನ್ನು ಉತ್ಸಾಹದಿಂದ ಸಮರ್ಥವಾಗಿ ಎದುರಿಸಬೇಕು ಎಂದು ಈ ಸಂದರ್ಭದಲ್ಲಿ ಹೇಳಿದರು. ಪರೀಕ್ಷೆಯ ಓದು, ಬರಹ, ಸಮಯ ನಿರ್ವಹಣೆ, ಆಹಾರ ಕ್ರಮಗಳು ಇತ್ಯಾದಿಗಳ ಬಗ್ಗೆ ತಿಳಿಹೇಳಿದರು.
ಕಾಲೇಜಿನ ಪ್ರಾಚಾರ್ಯ ಪ್ರೊ. ದಿನೇಶ್ ಚೌಟ ಅವರು ಅಧ್ಯಕ್ಷತೆ ವಹಿಸಿದ್ದರು. ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನ ಕುಮಾರ ಐತಾಳ್ ಉಪಸ್ಥಿತರಿದ್ದರು.
ತನ್ವಿ ಜೋಯಿಸ್ ಕಾರ್ಯಕ್ರಮ ನಿರೂಪಿಸಿದರು. ಅಂಕಿತಾ ಸ್ವಾಗತಿಸಿ, ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಪ್ರಧಾನ ಸಂಯೋಜಕಿ ಧನ್ಯ ಹೆಬ್ಬಾರ್ ಧನ್ಯವಾದ ಸಮರ್ಪಿಸಿದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ