ಪುತ್ತೂರು: ವಿಜ್ಞಾನದ ಪ್ರತಿಯೊಂದು ಬೆಳವಣಿಗೆಯು ಸಮಾಜಕ್ಕೆ ಕೊಡುಗೆ ನೀಡುವಲ್ಲಿ ಮಹತ್ತರಕಾರ್ಯ ನಿರ್ವಹಿಸುತ್ತದೆ. ವೈಜ್ಞಾನಿಕ ಅನ್ವೇಷಣೆಗಳು ಹೆಚ್ಚಾಗುತ್ತಿದ್ದಂತೆ ಜೀವನ ಶೈಲಿಯು ಬದಲಾಗುತ್ತಾ ಹೋಗುತ್ತದೆ. ಹೀಗಾಗಿ ಹೊಸ ಅನ್ವೇಷನೆಗಳು ಈ ವಿಚಾರಗಳ ಚೌಕಟ್ಟಿನಲ್ಲಿ ಮೂಡಬೇಕು ಎಂದು ಇಲ್ಲಿನ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಶಂಕರ ಜೋಯಿಸ ಎರ್ಮುಂಜ ಹೇಳಿದರು.
ಅವರು ವಿವೇಕಾನಂದ ಕಾಲೇಜಿನ ಸೈನ್ಸ್ ಅಸೋಸಿಯೇಷನ್ ಮತ್ತು ಐಕ್ಯೂಎಸಿ ಘಟಕದ ಆಶ್ರಯದಲ್ಲಿ ಸ್ನಾತಕೋತ್ತರ ರಸಾಯನಶಾಸ್ತ್ರ ಮತ್ತು ಗಣಿತ ವಿಭಾಗದ ಸಹಯೋಗದಲ್ಲಿ ‘ರಾಷ್ಟ್ರೀಯ ವಿಜ್ಞಾನ ದಿನ'ದ ಪ್ರಯುಕ್ತ ಆಯೋಜಿಸಲಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಅನೇಕ ವಿಷಯಗಳು ಡಿಜಿಟಲ್‌ಮಯವಾಗಿರುವ ಈ ಯುಗವನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು. ರೈಲ್ವೆ, ಬ್ಯಾಂಕಿಂಗ್, ಕೃಷಿ ಹೀಗೆ ಬಹುತೇಕ ಎಲ್ಲಾ ಕ್ಷೇತ್ರಗಳು ಒಂದಲ್ಲ ಒಂದು ರೀತಿಯಲ್ಲಿ ಡಿಜಿಟಲೀಕರಣವಾಗಿದೆ. ಹೀಗಾಗಿ ವಿಜ್ಞಾನದ ಮೇಲೆ ನಮ್ಮ ಅವಲಂಬನೆ ಅನಿವಾರ್ಯ ಎಂದು ಅಭಿಪ್ರಾಯಪಟ್ಟರು.
ಕಾಲೇಜಿನ ಐಕ್ಯೂಎಸಿ ಸಂಯೋಜಕ ಶಿವಪ್ರಸಾದ್ ಕೆ.ಎಸ್. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣುಗಣಪತಿ ಭಟ್ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಎನಿಗ್ಮಾ, ಇಗ್ನೈಟ್, ಅಟೊಮಿಕಾ ಮಿಸ್ಟೀರಿಯಾ, ಫೇಸ್ ಪೇಂಟಿಂಗ್, ಸ್ಟಾರ್‌ವಾರ್ ಎಂಬ ವಿವಿಧ ಸ್ಪರ್ಧೆಗಳು ನಡೆದವು. ವಿದ್ಯಾರ್ಥಿನಿ ಸಿಂಚನಾ ಯು.ಬಿ ಸ್ವಾಗತಿಸಿ, ಅಪೂರ್ವ ವಂದಿಸಿದರು ವಿದ್ಯಾರ್ಥಿಗಳಾದ ಶ್ರೀವರಧ, ಅಭಿಷ್ಕ ಪ್ರಾರ್ಥಿಸಿ, ನಿಶಿತಾ ಪ್ರಕಾಶ್ ಕಾರ್ಯಕ್ರಮ ನಿರ್ವಹಿಸಿದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ