ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗ ರೂಪಿಸುತ್ತಿರುವ ಸುದರ್ಶನ ಮಾಸಪತ್ರಿಕೆಯ ಲೋಕಾರ್ಪಣಾ ಸಮಾರಂಭ ಮಾರ್ಚ್ 19ರಂದು ಬೆಳಗ್ಗೆ 9.30ಕ್ಕೆ ಕಾಲೇಜಿನಲ್ಲಿ ನಡೆಯಲಿದೆ. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಅಧ್ಯಕ್ಷತೆ ವಹಿಸುವರು. ಬೆಂಗಳೂರಿನ ಹಿರಿಯ ಪತ್ರಕರ್ತ ದು.ಗು.ಲಕ್ಷ್ಮಣ ಮಾಸಪತ್ರಿಕೆಯನ್ನು ಬಿಡುಗಡೆಗೊಳಿಸುವರು.
ಪುತ್ತೂರು ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷ ಶ್ರವಣ್ ಕುಮಾರ್ ನಾಳ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ, ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಕಾಲೇಜಿನ ಪ್ರಾಚಾರ್ಯ ಡಾ.ವಿನಾಯಕ ಭಟ್ಟ ಗಾಳಿಮನೆ, ಐಕ್ಯುಎಸಿ ಘಟಕದ ಸಂಯೋಜಕ ಚಂದ್ರಕಾಂತ ಗೋರೆ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಕಾಶನದಲ್ಲಿ ಸುದರ್ಶನ ಮಾಸಪತ್ರಿಕೆ ಮೂಡಿಬರಲಿದೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ