ಮಂಗಳೂರು: ಖ್ಯಾತ ದಂತ ವೈದ್ಯ ಶಸ್ತ್ರಚಿಕಿತ್ಸಕ, ವೈದ್ಯ ಸಾಹಿತಿ ಡಾ. ಮುರಲೀ ಮೋಹನ್ ಚೂಂತಾರು ಇವರ 13ನೇ ಕೃತಿ “ಸ್ವಾದ” ಆಹಾರ ಸಂಹಿತೆ ಬುಧವಾರ (ಮಾ.30) ಸಾಯಂಕಾಲ 7:30 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ. ಈ ಕೃತಿಯನ್ನು ಖ್ಯಾತ ಹಾಸ್ಯ ಸಾಹಿತಿ ಶ್ರೀಮತಿ ಭುವನೇಶ್ವರಿ ಹೆಗಡೆ ಅವರು ನಗರದ ಮಾಯಾ ಇಂಟರ್‌ನ್ಯಾಷನಲ್ ಹೋಟೆಲ್ ಇದರ ಸಭಾಂಗಣದಲ್ಲಿ ಲೋಕಾರ್ಪಣೆಗೊಳಿಸಲಿದ್ದಾರೆ.
ಮುಖ್ಯ ಅತಿಥಿಯಾಗಿ ಖ್ಯಾತ ಕವಿ ವಿಮರ್ಶಕ ಡಾ|| ವಸಂತ ಕುಮಾರ್ ಪೆರ್ಲ ಅವರು ಭಾಗವಹಿಸಲಿದ್ದಾರೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತು, ಮಂಗಳೂರು ಇದರ ಅಧ್ಯಕ್ಷರಾದ ಡಾ|| ಮಂಜುನಾಥ್. ಎಸ್. ರೇವಣಕರ್ ಇವರ ಅಧ್ಯಕ್ಷತೆಯಲ್ಲಿ ಈ ಸಮಾರಂಭ ಜರುಗಲಿರುವುದು. ಹವ್ಯಕ ಸಭಾ ಮಂಗಳೂರು ಇದರ ಅಧ್ಯಕ್ಷರಾದ ಡಾ|| ರಾಜೇಂದ್ರ ಪ್ರಸಾದ್ ಇವರ ಗೌರವ ಉಪಸ್ಥಿತಿಯಲ್ಲಿ ಈ ಸಮಾರಂಭ ಜರುಗಲಿರುವುದು.
ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ (ರಿ) ಮಂಗಳೂರು ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಜರುಗಲಿರುವುದು ಎಂದು ಪ್ರತಿಷ್ಠಾನದ ಕರ‍್ಯದರ್ಶಿ ಡಾ|| ಮುರಲೀ ಮೋಹನ್ ಚೂಂತಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ