ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠ, ಬೆಟ್ಟಂಪಾಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜುಗಳು ಜಂಟಿಯಾಗಿ ʼತುಳು- ಸಂಸ್ಕೃತಿ ಇತಿಹಾಸದಲ್ಲಿ ಭಾರತೀಯತೆಯ ಹೊಳಹುಗಳುʼ ಎಂಬ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಬೆಟ್ಟಂಪಾಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಮಾರ್ಚ್ 4 (ಶುಕ್ರವಾರ) ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ತುಳು ಜಾನಪದ ಸಂಶೋಧಕ ಡಾ. ಅರುಣಕುಮಾರ್ ಎಸ್ ಆರ್ ಆಶಯ ಭಾಷಣ ಮಾಡಲಿದ್ದಾರೆ. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ರಂಗನಾಥ ರೈ ಗುತ್ತು, ವಿವೇಕಾನಂದ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ಪಿ ಮುಖ್ಯ ಅತಿಥಿಗಳಾಗಿರಲಿದ್ದಾರೆ.
ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿ ಅಧ್ಯಕ್ಷತೆ ವಹಿಸಲಿದ್ದಾರೆ. ಬಳಿಕ ತುಳು ಭಾಷೆ, ಸಂಸ್ಕೃತಿ, ಪ್ರಕೃತಿಗೆ ಸಂಬಂಧಿಸಿದ ವಿವಿದ ವಿಚಾರಗೋಷ್ಠಿಗಳು ನಡೆಯಲಿವೆ. ತುಳು ಸಾಹಿತ್ಯ ಅಕಾಡೆಮಿಯ ಮಾಜಿ ರಿಜಿಷ್ಟ್ರಾರ್ ಚಂದ್ರಹಾಸ ರೈ ಸಮಾರೋಪ ಭಾಷಣ ಮಾಡಲಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ