ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ವಾಲಿಬಾಲ್, ಥ್ರೋಬಾಲ್ ಪಂದ್ಯಾಟ

Upayuktha
0

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ನೆಲ್ಯಾಡಿಯ ವಿಶ್ವವಿದ್ಯಾನಿಲಯ ಕಾಲೇಜುಗಳು ಜಂಟಿಯಾಗಿ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ಕಾಲೇಜು ವಾಲಿಬಾಲ್ (ಪುರುಷರು) ಮತ್ತು ಥ್ರೋಬಾಲ್ (ಮಹಿಳೆಯರು) ಪಂದ್ಯಾವಳಿಯನ್ನು ನೆಲ್ಯಾಡಿಯ ಗಾಂಧಿ ಮೈದಾನದಲ್ಲಿ ಮಾರ್ಚ್ 21 (ಸೋಮವಾರ) ಆಯೋಜಿಸಿವೆ.


ಮುಂಜಾನೆ 9.30 ಕ್ಕೆ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಿವಿ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ವಹಿಸಲಿದ್ದಾರೆ. ಪುತ್ತೂರಿನ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಎಸ್ ಗೌಡ, ಎಲೈಟ್ ರಬ್ಬರ್ಸ್ನ ಯು ಪಿ ವರ್ಗೀಸ್ ಅತಿಥಿಗಳಾಗಿರಲಿದ್ದಾರೆ. ಸಂಜೆ 4.30 ಕ್ಕೆ ನಡೆಯುವ ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆಯನ್ನು ವಿವಿಯ ಕುಲಸಚಿವ ಪ್ರೊ. ಕಿಶೋರ್ ಕುಮಾರ್ ಸಿ.ಕೆ ವಹಿಸಲಿದ್ದಾರೆ. ಗ್ರಾಮ ಪಂಚಾಯತ್ ಅಧ್ಯಕ್ಷೆ ಚೇತನ, ಟ್ರೇಡರ್ಸ್ ಅಸೋಸಿಯೇಷನ್ ಅಧ್ಯಕ್ಷ ರಫೀಕ್ ಸೀಗಲ್, ಕಡಬದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವಿಮಲ್ ಕುಮಾರ್ ಅತಿಥಿಗಳಾಗಿರಲಿದ್ದಾರೆ ಎಂದು ಕಾಲೇಜಿನ ಸಂಯೋಜಕ ಡಾ. ಜಯರಾಜ್ ಎನ್ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top