ಮಾ. 29ರಂದು ಧರ್ಮಸ್ಥಳದಲ್ಲಿ ಯೋಗ ಮಹೋತ್ಸವ, ಪ್ರಾತ್ಯ್ರಕ್ಷಿಕೆ

Upayuktha
0



ಉಜಿರೆ: ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯದ ಆಶ್ರಯದಲ್ಲಿ ಇದೇ 29ರಂದು ಮಂಗಳವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಯೋಗ ಮಹೋತ್ಸವದ ಅಂಗವಾಗಿ ಯೋಗ ಪ್ರಾತ್ಯಕ್ಷಿಕೆ ಮತ್ತು ಕಾರ್ಯಾಗಾರವನ್ನು ಆಯೋಜಿಸಿದ್ದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಮಾರಂಭವನ್ನು ಉದ್ಘಾಟಿಸುವರು ಎಂದು ಉಜಿರೆಯ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ ಶೆಟ್ಟಿ ತಿಳಿಸಿದ್ದಾರೆ.


ವಿಶ್ವದೆಲ್ಲೆಡೆ ಜೂನ್ 21 ರಂದು ನಡೆಯುವ ವಿಶ್ವಯೋಗ ದಿನಾಚರಣೆಗೆ ಪೂರ್ವಭಾವಿಯಾಗಿ ದೇಶದ ಪ್ರತಿಷ್ಠಿತ 100 ಯೋಗ ಸಂಸ್ಥೆಗಳಿಂದ 100 ಐತಿಹಾಸಿಕ ಕೇಂದ್ರಗಳಲ್ಲಿ ಒಂದು ದಿನದ ಯೋಗ ಪ್ರಾತ್ಯಕ್ಷಿಕೆ ಮತ್ತು ಕಾರ್ಯಾಗಾರವನ್ನು ಆಯೋಜಿಸಲಾಗಿದೆ.


ಬೆಳ್ತಂಗಡಿ ತಾಲ್ಲೂಕಿನಲ್ಲಿ 15 ಕೇಂದ್ರಗಳಲ್ಲಿ ಇದೇ 23 ರಿಂದ ಏ.3ರ ವರೆಗೆ ಸಾರ್ವಜನಿಕರಿಗಾಗಿ ಉಚಿತ ಯೋಗ ಶಿಬಿರ ಹಮ್ಮಿಕೊಳ್ಳಲಾಗಿದೆ.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



hit counter

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top