ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಚೀಫ್ ವಾರ್ಡನ್ ಹುದ್ದೆಗೆ ಅರ್ಜಿ ಆಹ್ವಾನ

Upayuktha
0

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾಪಡೆ ಆರಂಭವಾಗಿದ್ದು, ಇದರ ಮೇಲುಸ್ತುವಾರಿಯನ್ನು ನೋಡಿಕೊಳ್ಳಲು ಚೀಫ್ ವಾರ್ಡನ್ ಹುದ್ದೆಗೆ ಅರ್ಜಿಯನ್ನು ಆಸಕ್ತ ಅಭ್ಯರ್ಥಿಗಳಿಂದ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವೀದರರಾಗಿರಬೇಕು. ಯಾವುದೇ ರಾಜಕೀಯ ಪಕ್ಷದಲ್ಲಿರಬಾರದು, ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಮೇಲೆ ಯಾವುದೇ ಕ್ರಿಮಿನಲ್ ಮೊಕದ್ದಮೆಗಳು ಇರಬಾರದು.


ಅರ್ಜಿ ಸಲ್ಲಿಸುವ ಕಡೆಯ ದಿನಾಂಕಕ್ಕೆ 50 ವರ್ಷ ಮೇಲ್ಪಟ್ಟಿರಬಾರದು. ಜಿಲ್ಲಾ ಕೇಂದ್ರದ 20 ಕಿಲೋಮೀಟರ್ ಒಳಗೆ ವಾಸವಾಗಿರಬೇಕು. ದೈಹಿಕವಾಗಿ ಸದೃಢರಾಗಿರುವ ಕುರಿತು ಜಿಲ್ಲಾ ಸರ್ಜನ್‌ರಿಂದ ವೈದ್ಯಕೀಯ ಪ್ರಮಾಣ ಪತ್ರ ಪಡೆದು ಸಲ್ಲಿಸಬೇಕು. ಮಿಲಿಟರಿ, ಪ್ಯಾರಾ ಮಿಲಿಟರಿ, ಪೊಲೀಸ್ ಇಲಾಖೆಯಲ್ಲಿ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿದ, ಶೌರ್ಯ ಪ್ರಶಸ್ತಿಯನ್ನು ಪಡೆದಂತಹ ಹಾಗೂ ಎನ್.ಸಿ.ಸಿ. ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.


ತುರ್ತು ಸಂದರ್ಭಗಳಲ್ಲಿ ಜಿಲ್ಲಾಡಳಿತದವರೊಂದಿಗೆ ಸ್ಪಂದಿಸುವಂತವರಾಗಿರಬೇಕು. ಅರ್ಜಿ ತಲುಪಿಸಲು ಕಡೆಯ ದಿನಾಂಕ 31-03-2022 ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಹಾಗೂ ದಂಡಾಧಿಕಾರಿಗಳು ಡಾ|| ರಾಜೇಂದ್ರ ಕೆ.ವಿ IAS ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top