ಶ್ರೀ ಭಾರತಿ ಕಾಲೇಜಿನಲ್ಲಿ ಮಾ.6 ರಂದು ರಕ್ತದಾನ ಶಿಬಿರ

Upayuktha
0

ನಂತೂರು: ದಿನಾಂಕ 06-03-2022ನೇ ಭಾನುವಾರದಂದು ನಗರದ ನಂತೂರಿನಲ್ಲಿರುವ ಶ್ರೀ ಭಾರತಿ ಕಾಲೇಜು ಇಲ್ಲಿ ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ(ರಿ) ಮಂಗಳೂರು ಮತ್ತು ಮಂಗಳೂರು ಹವ್ಯಕ ಸಭಾ ಇವರ ಜಂಟಿ ಆಶ್ರಯದಲ್ಲಿ ರಕ್ತನಿಧಿ ವೆನ್‌ಲಾಕ್ ಆಸ್ಪತ್ರೆ ಮಂಗಳೂರು, ಶ್ರೀ ಭಾರತಿ ಕಾಲೇಜು ನಂತೂರು ಇವರ ಸಹಕಾರದೊಂದಿಗೆ ಉಚಿತ ರಕ್ತದಾನ ಶಿಬಿರ ಜರುಗಲಿರುವುದು.


ಈ ರಕ್ತದಾನ ಶಿಬಿರ ಬೆಳಗ್ಗೆ 9 ರಿಂದ ಮಧ್ಯಾಹ್ನ 1 ಘಂಟೆಯವರೆಗೆ ನಡೆಯಲಿದ್ದು, ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ರಕ್ತದಾನ ಮಾಡಬೇಕೆಂದು ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ (ರಿ) ಮಂಗಳೂರು ಇದರ ಕಾರ‍್ಯದರ್ಶಿ ಡಾ|| ಮುರಲೀಮೋಹನ ಚೂಂತಾರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ಈ ಶಿಬಿರದ ಉದ್ಘಾಟನೆಯನ್ನು ಮಂಗಳೂರು ಹವ್ಯಕ ಸಭಾ ಇದರ ಅಧ್ಯಕ್ಷ ಶ್ರೀ ಸುಬ್ರಹ್ಮಣ್ಯ ಕಾಶೀಮಠ ಇವರು ನೆರವೇರಿಸಲಿದ್ದಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
To Top