|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಎಸ್. ಡಿ. ಎಂ ಕಾಲೇಜಿನಲ್ಲಿ ವಿಚಾರ ಸಂಕಿರಣ ಮತ್ತು ಮಾಧ್ಯಮ ಸಂವಾದ ಕಾರ್ಯಕ್ರಮ

ಎಸ್. ಡಿ. ಎಂ ಕಾಲೇಜಿನಲ್ಲಿ ವಿಚಾರ ಸಂಕಿರಣ ಮತ್ತು ಮಾಧ್ಯಮ ಸಂವಾದ ಕಾರ್ಯಕ್ರಮ


ಉತ್ತಮ ಜ್ಞಾನಕ್ಕೆ ನಿರಂತರ ಓದುವಿಕೆ ಅಗತ್ಯ : ಸದಾಶಿವ ಶೆಣೈ


ಉಜಿರೆ ಮಾ.24: ಸಾಹಿತ್ಯ ಕೃತಿಗಳ ನಿರಂತರ ಓದುವಿಕೆಯು ಪತ್ರಕರ್ತರ ಉತ್ತಮ ಜ್ಞಾನಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಹೇಳಿದರು.


ಉಜಿರೆ ಎಸ್.ಡಿ.ಎಂ. ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘ, ಬೆಳ್ತಂಗಡಿ ತಾಲ್ಲೂಕು ಪತ್ರಕರ್ತರ ಸಂಘ ಮತ್ತು ಎಸ್. ಡಿ. ಎಂ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗಗಳ ಸಂಯುಕ್ತ ಆಶ್ರಮದಲ್ಲಿ "ಮಾಧ್ಯಮದ ಮುಂದಿರುವ ಸವಾಲುಗಳು" ಎಂಬ ವಿಚಾರ ಸಂಕಿರಣ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಗುರುವಾರ ಮಾತಾಡಿದರು.


ಉತ್ತಮ ರೀತಿಯ ಬರವಣಿಗೆ ಮತ್ತು ವಿಷಯ ಸಂಗ್ರಹಣೆಯು ಪತ್ರಕರ್ತನ ಬೆಳವಣಿಗೆಗೆ ಪೂರಕ. ಪತ್ರಕರ್ತನಿಗೆ ಮಾಧ್ಯಮ ಲೋಕದ ಎಲ್ಲಾ ಆಯಾಮಗಳ ಕುರಿತು ಸಮಗ್ರ ಜ್ಞಾನ ಇರಬೇಕು. ಪತ್ರಕರ್ತರು ಮಾಡುವ ವರದಿಯು ಮೇಲೆ ಜನರಿಗೆ ಜನರಿಗೆ ವಿಶ್ವಾಸ ಮೂಡುವಂತಿರಬೇಕು. ಒಬ್ಬ ಪತ್ರಕರ್ತನ ಸತ್ಯ ನಿಷ್ಠತೆಯು ಆತನ ಉತ್ತಮ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಹೇಳಿದರು.


ಪ್ರಾಸ್ತವಿಕ ಮಾತುಗಳನ್ನಾಡಿದ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಮಾತನಾಡಿ ಇಂದಿನ ದಿನಾಮಾನದಲ್ಲಿ ಮಾಧ್ಯಮಗಳ ವಿಪರೀತ ಬೆಳವಣಿಗೆಯಿಂದ ಮಾಧ್ಯಮಗಳು ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ಮರೆತು ತಮ್ಮ ಘನತೆಯನ್ನು ಕಳೆದುಕೊಳ್ಳುತ್ತಿದೆ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಪಿ.ಎನ್. ಉದಯಚಂದ್ರ ಮಾತನಾಡಿ ಪ್ರಸ್ತುತ ದಿನಮಾನದಲ್ಲಿ ಪತ್ರಕರ್ತರಿಗೆ ಹಲವಾರು ಸವಾಲುಗಳಿವೆ. ಪತ್ರಿಕಾರಂಗವು ಈಗ ಉದ್ಯಮರಂಗವಾಗಿ ಬೆಳೆಯುತ್ತಿದೆ ಎಂದು ಅಭಿಪ್ರಾಯ ಪಟ್ಟರು.


ಈ ಸಂದರ್ಭದಲ್ಲಿ ಸುದ್ದಿ ಸಮೂಹದ ಮುಖ್ಯಸ್ಥ ಡಾ. ಯು. ಪಿ. ಶಿವಾನಂದ ಭ್ರಷ್ಟಾಚಾರ ಮುಕ್ತ ಆಡಳಿತದ ಬಗೆಗಿನ ಪ್ರತಿಜ್ಞೆಯನ್ನು ಬೋಧಿಸಿದರು.


ಈ ಸಂದರ್ಭದಲ್ಲಿ ಉಜಿರೆಯ ಶ್ರೀಕೃಷ್ಣಾನುಗ್ರಹ ಸಭಾಭವನದಲ್ಲಿ ಎರಡು ದಿನಗಳ ಕಾಲ ನಡೆದ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ವಿಭಾಗದ ಮೂರನೇ ರಾಜ್ಯ ಅಧಿವೇಶನ ಕಾರ್ಯಕ್ರಮದ ಕುರಿತು ಎಸ್. ಡಿ ಎಂ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ತಯಾರಿಸಿದ "ನುಡಿಮುನ್ನುಡಿ" ಎಂಬ ವಿಶೇಷ ಸಂಚಿಕೆಯನ್ನು ಮತ್ತು ಎಸ್. ಡಿ. ಎಂ. ಗೆಜೆಟ್ ಪ್ರಾಯೋಗಿಕ ಪತ್ರಿಕೆಯನ್ನು ಮುಖ್ಯ ಅತಿಥಿಗಳು ಬಿಡುಗಡೆಗೊಳಿಸಿದರು.


ವೇದಿಕೆಯಲ್ಲಿ ಬೆಳ್ತಂಗಡಿ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಧನಕೀರ್ತಿ ಆರಿಗ ಮತ್ತು ಎಸ್. ಡಿ. ಎಂ. ಸ್ನಾತಕೋತ್ತರ ಕೇಂದ್ರದ ಡೀನ್ ಡಾ. ವಿಶ್ವನಾಥ್ ಉಪಸ್ಥಿತರಿದ್ದರು. ಹಾಗೆಯೇ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲ್ಲೂಕು ಪತ್ರಕರ್ತ ಸಂಘದ ಪದಾಧಿಕಾರಿಗಳು, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದ ಮುಖ್ಯಸ್ಥ ಡಾ. ಭಾಸ್ಕರ ಹೆಗ್ಡೆ ಸ್ವಾಗತಿಸಿದರು. ವಿದ್ಯಾರ್ಥಿ ಜಗದೀಶ್ ಬಳಂಜ ವಂದಿಸಿದರು. ವಿದ್ಯಾರ್ಥಿ ಶಂತನು ಪದ್ಮುಂಜ ಕಾರ್ಯಕ್ರಮ ನಿರೂಪಿಸಿದರು.


ವರದಿ: ಶಶಿಧರ ನಾಯ್ಕ ಎ

ಪ್ರಥಮ ಎಂ.ಸಿ.ಜೆ.

ಎಸ್. ಡಿ. ಎಂ. ಸ್ನಾತಕೋತ್ತರ ಕೇಂದ್ರ, ಉಜಿರೆ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post