ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆ ಇದರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ದಿನಾಂಕ: 08-03-2022 ರ ಮಂಗಳವಾರದಂದು ಜಿಲ್ಲಾ ಗೃಹರಕ್ಷಕ ದಳ, ಮೇರಿಹಿಲ್, ಮಂಗಳೂರು ಕಚೇರಿಯಲ್ಲಿ ಬೆಳಿಗ್ಗೆ 9.30 ಗಂಟೆಗೆ ಮಹಿಳಾ ದಿನಾಚರಣಾ ಕಾರ್ಯಕ್ರಮ ಮತ್ತು ಮೂವರು ಹಿರಿಯ ಮಹಿಳಾ ಗೃಹರಕ್ಷಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿರುವುದು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಾದೇಷ್ಟರಾದ ಡಾ: ಮುರಲೀ ಮೋಹನ್ ಚೂಂತಾರು ಇವರು ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಗೃಹರಕ್ಷಕಿಯರಾದ ಶ್ರೀಮತಿ ಆಶಾ, ಮೆಟಲ್ ಸಂಖ್ಯೆ 143, ಕುಮಾರಿ ರತ್ನಾ, ಮೆಟಲ್ ಸಂಖ್ಯೆ 155, ಹಾಗೂ ಶ್ರೀಮತಿ ಮಮತ, ಮೆಟಲ್ ಸಂಖ್ಯೆ 140 ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಗೃಹರಕ್ಷಕಿಯರು ಭಾಗವಹಿಸಬೇಕಾಗಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆಯ ಮುಖ್ಯಪಾಲಕರಾದ ಡಾ|| ಮುರಲೀ ಮೋಹನ್ ಚೂಂತಾರು ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ