ಮಂಗಳೂರು: ಸಂಶೋಧನಾ ಕ್ಷೇತ್ರದಲ್ಲಿ ಸಲ್ಲಿಸಿದ ಕೊಡುಗೆಯನ್ನು ಗಮನಿಸಿ ಮೂಡುಬಿದಿರೆಯ ಆಳ್ವಾಸ್ ವಿದ್ಯಾಸಂಸ್ಥೆ, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ಇಲ್ಲಿನ ಸೂಕ್ಷ್ಮಾಣುಜೀವಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಭಾರತಿ ಪ್ರಕಾಶ್ ಅವರನ್ನು ಗೌರವಿಸಿದೆ.
ಇತ್ತೀಚೆಗೆ ಮೂಡಬಿದಿರೆಯ ವಿದ್ಯಾಗಿರಿಯ ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ಆಳ್ವಾಸ್ ಕಾಲೇಜಿನ ವಿಮೆನ್ ಡೆವಲಪ್ಮೆಂಟ್ ಸೆಲ್ ವತಿಯಿಂದ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಡಾ. ಮೋಹನ್ ಆಳ್ವ, ಡಾ. ಭಾರತಿ ಪ್ರಕಾಶ್ ಸೇರಿದಂತೆ ಇತರ ನಾಲ್ವರು ಸಾಧಕರನ್ನು ಸನ್ಮಾನಿಸಿದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ