ವಿವಿ ಕಾಲೇಜು: ಕೋವಿಡ್‌ ಲಸಿಕಾ ಶಿಬಿರ ಮುಕ್ತಾಯ

Upayuktha
0

 

ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಯುವ ರೆಡ್‌ ಕ್ರಾಸ್‌ ಘಟಕದ ವತಿಯಿಂದ ಸೋಮವಾರ ಕಾಲೇಜಿನಲ್ಲಿ 15 ವರ್ಷ ವಯಸ್ಸು ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಎರಡನೇ ಡೋಸ್‌ ಕೋವಿಡ್‌ ಲಸಿಕೆ ನೀಡಲಾಯಿತು. ಸುಮಾರು 105 ವಿದ್ಯಾರ್ಥಿಗಳು ಕೊವ್ಯಾಕ್ಸಿನ್‌ ಲಸಿಕೆ ಪಡೆದುಕೊಂಡರು.


ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯಾ ರೈ, ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿಗಳು, ಮಂಗಳೂರು ವಿಶ್ವವಿದ್ಯಾಲಯದ ಯುವ ರೆಡ್ ಕ್ರಾಸ್ ನೋಡಲ್ ಅಧಿಕಾರಿ ಡಾ. ಗಣಪತಿ ಗೌಡ ಮತ್ತು ಸ್ವಯಂ ಸೇವಕರು, ಪತ್ರಿಕೋದ್ಯಮ ವಿಭಾಗದ ಡಾ. ಸೌಮ್ಯಾ ಮೊದಲಾದವರು ಸಹಕರಿಸಿದರು.


ಯುವ ರೆಡ್ ಕ್ರಾಸ್ ಘಟಕದ ಮೂಲಕ ಕಾಲೇಜು ಇದುವರೆಗೆ 5 ಲಸಿಕಾ ಶಿಬಿರಗಳನ್ನು ಯಶಸ್ವಿಯಾಗಿ ನಡೆಸಿ ಎಲ್ಲಾ ಅಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಲಸಿಕೆ ನೀಡಿ ಶೇಕಡ ನೂರರಷ್ಟು ಲಸಿಕೆ ನೀಡಿದ ಸಾಧನೆ ಮಾಡಿದೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
To Top