ಕುಣಿಗಲ್: ಬಿದನಗೆರೆ ಬಸವೇಶ್ವರ ಮಠದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ವಿಶ್ವ ವಿಖ್ಯಾತ 161 ಅಡಿ ಎತ್ತರದ ಪಂಚಮುಖಿ ಆಂಜನೇಯಸ್ವಾಮಿ ವಿಗ್ರಹವನ್ನು ಪ್ರಧಾನಿ ಮೋದಿ ಅವರು ವರ್ಚುವಲ್ ವಿಡಿಯೋ ಮೂಲಕ ಏ. 10 ಭಾನುವಾರ ಶ್ರೀರಾಮ ನವಮಿಯಂದು ಲೋಕಾರ್ಪಣೆ ಮಾಡಲಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಶ್ರೀ ಕ್ಷೇತ್ರದ ಪೀಠಾಧಿಕಾರಿ ಡಾ.ಧನಂಜಯ ಗುರೂಜಿ ತಿಳಿಸಿದ್ದಾರೆ.