ನವದೆಹಲಿ: ಈ ವರ್ಷದ ಮೊದಲ ವಿದೇಶ ಪ್ರವಾಸವನ್ನು ಪ್ರಧಾನಿ ನರೇಂದ್ರ ಮೋದಿ ಕೈಗೊಳ್ಳಲಿದ್ದು, ಅವರು ತಮ್ಮ ಮೂರು ದಿನಗಳ ಪ್ರವಾಸದಲ್ಲಿ 25 ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಒಟ್ಟು 65 ಗಂಟೆಗಳ ಕಾಲ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರವಾಸದಲ್ಲಿ ಅವರು ಏಳು ದೇಶಗಳ ಎಂಟು ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ , ಜೊತೆಗೆ 50 ಜಾಗತಿಕ ಉದ್ಯಮಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರವಾಸದ ಸಂದರ್ಭದಲ್ಲಿ ಅಲ್ಲಿನ ಅನಿವಾಸಿ ಭಾರತೀಯರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಮೇ 2 ರಿಂದ ಜರ್ಮನಿ, ಡೆನ್ಮಾರ್ಕ್ ಮತ್ತು ಫ್ರಾನ್ಸ್‌ಗೆ ಮೂರು ದಿನಗಳ ಪ್ರವಾಸವನ್ನು ಕೈಗೊಳ್ಳಲಿದ್ದು, ಮೊದಲು ಜರ್ಮನಿಗೆ ಪ್ರಯಾಣಿಸಿ, ನಂತರ ಡೆನ್ಮಾರ್ಕ್‌ಗೆ ಭೇಟಿ ನೀಡುತ್ತಾರೆ ಮತ್ತು ಮೇ 4 ರಂದು ವಾಪಸಾಗುವಾಗ ಪ್ಯಾರಿಸ್ಗೆ ಭೇಟಿ ನೀಡಲಿದ್ದಾರೆ ಎಂದು ಮಾಹಿತಿ ಮೂಲಕ ತಿಳಿದು ಬಂದಿದೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ