|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ. ಸೋಮನಾಥ ನಾಯಕ್ ಬಂಧನಕ್ಕೆ ಬೆಳ್ತಂಗಡಿ ನ್ಯಾಯಾಲಯದಿಂದ ವಾರಂಟ್ ಜಾರಿ

ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ. ಸೋಮನಾಥ ನಾಯಕ್ ಬಂಧನಕ್ಕೆ ಬೆಳ್ತಂಗಡಿ ನ್ಯಾಯಾಲಯದಿಂದ ವಾರಂಟ್ ಜಾರಿ



ಬೆಳ್ತಂಗಡಿ: ನಾಗರಿಕ ಸೇವಾ ಟ್ರಸ್ಟ್‌ನ ಅಧ್ಯಕ್ಷ ಕೆ. ಸೋಮನಾಥ ನಾಯಕ್‌ರವರನ್ನು ಬಂಧಿಸಿ 3 ತಿಂಗಳ ಅವಧಿಯ ಸೆರೆಮನೆ ವಾಸಕ್ಕೆ ಕಳುಹಿಸುವುದಕ್ಕೆ ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ದಸ್ತಗಿರಿ ವಾರಂಟ್ ಹೊರಡಿಸಿದೆ.


ಪ್ರಕರಣದ ಸಾರಂಶ:-

ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಿ ವೀರೇಂದ್ರ ಹೆಗ್ಗಡೆಯವರು, ಅಥವಾ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗು ಅಲ್ಲಿಯ ಸಂಸ್ಥೆಗಳ ಕುರಿತು ಗೌರವಕ್ಕೆ ಚ್ಯುತಿ ತರುವ ಯಾವುದೇ ರೀತಿಯ ಬರವಣಿಗೆ ಅಥವಾ ಹೇಳಿಕೆ ನೀಡಬಾರದೆಂದು ಈ ಹಿಂದೆ ಬೆಳ್ತಂಗಡಿ ನ್ಯಾಯಾಲಯ ಮೂಲ ದಾವಾ ನಂಬ್ರ 226/13 ರಲ್ಲಿ ಸೋಮನಾಥ ನಾಯಕ್ ಮತ್ತು ಇತರ 5 ಮಂದಿಯ ವಿರುದ್ಧ ಪ್ರತಿಬಂಧಕಾಜ್ಞೆ ಮಾಡಿತ್ತು. ಆದರೂ ನ್ಯಾಯಾಲಯದ ಆದೇಶಕ್ಕೆ ಗೌರವ ನೀಡದೆ ಸೋಮನಾಥ ನಾಯಕ್ ಸುಳ್ಳು ಆರೋಪಗಳನ್ನು ಹೆಗ್ಗಡೆಯವರ ವಿರುದ್ಧ ಸಾಮಾಜಿಕ ಜಾಲತಾಣಗಳ ಮುಖೇನ ಮಾಡುತ್ತಲೇ ಇದ್ದರು. ಈ ವಿಚಾರವನ್ನು ಕ್ಷೇತ್ರದ ಪರವಾಗಿ ಮಿಸ್ ಕೇಸ್ ನಂಬ್ರ 3/15 ರಲ್ಲಿ ನ್ಯಾಯಾಲಯದ ಮುಂದಿರಿಸಿದಾಗ, ಸುದೀರ್ಘ ವಿಚಾರಣೆ ನಡೆದು ಸೋಮನಾಥ ನಾಯಕ್ ದೋಷಿ ಎಂದು ಪರಿಗಣಿಸಿದ ನ್ಯಾಯಾಲಯ ಸೋಮನಾಥ ನಾಯಕ್‌ರವರಿಗೆ 3 ತಿಂಗಳ ಸಜೆಯಲ್ಲದೆ, ಕ್ಷೇತ್ರಕ್ಕೆ 4.5 ಲಕ್ಷ ಪರಿಹಾರವನ್ನು ನೀಡಬೇಕು ಎಂದು ಆದೇಶಿಸಿ ನ್ಯಾಯಾಲಯ ನಾಯಕ್‌ರ ಆಸ್ತಿಯನ್ನು ಸಹ ಮುಟ್ಟುಗೋಲು ಹಾಕಿಕೊಂಡಿತ್ತು. ಈ ಆದೇಶದ ವಿರುದ್ಧ ಸೋಮನಾಥ  ನಾಯಕ್ ಅಪೀಲು ಸಲ್ಲಿಸಿ ತನಗೆ ಇನ್ನೂ ಹೆಚ್ಚಿನ ತನಿಖೆಗೆ ಅವಕಾಶ ನೀಡಬೇಕೆಂದು ಅಪರ ನ್ಯಾಯಾಲಯಕ್ಕೆ ನಿವೇದಿಸಿಕೊಂಡಂತೆ, ಅವರಿಗೆ ಹೆಚ್ಚುವರಿ ಅವಕಾಶ ನೀಡುವಂತೆ ಅಪರ ನ್ಯಾಯಾಲಯ ಕೇಸನ್ನು ತನಿಖಾ ನ್ಯಾಯಾಲಯಕ್ಕೆ ಮರು ರವಾನಿಸಿತ್ತು.


ಮತ್ತೆ ತನಿಖಾ ನ್ಯಾಯಾಲಯವು ಹಿಂದಿನ ಆದೇಶವನ್ನೇ ಖಾಯಂ ಮಾಡಿದುದರ ವಿರುದ್ಧ ಪುನಃ ನಾಯಕ್ ಅಪೀಲು ಸಲ್ಲಿಸಿದಾಗ ಮತ್ತೂ ಹೆಚ್ಚಿನ ತನಿಖೆಗೆ ಕೇಸನ್ನು ಅಪರ ನ್ಯಾಯಾಲಯ ತನಿಖಾ ನ್ಯಾಯಾಲಯಕ್ಕೆ ಮರು ರವಾನಿಸಿತ್ತು. ತನಿಕಾ ನ್ಯಾಯಾಲಯವು ಮುಂದುವರಿದ ತನಿಖೆ ನಡೆಸಿ ದಿನಾಂಕ:  08-06-2021 ರಂದು ತನ್ನ ಅಂತಿಮ ತೀರ್ಪು ನೀಡಿ  ಸೋಮನಾಥ ನಾಯಕ್ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಶಿಕ್ಷಾರ್ಹ ಅಪರಾಧ ಎಸಗಿರುವುದು ಸಾಬೀತಾಗಿದೆಯೆಂದೂ, ಅವರಿಗೆ ಈ ಹಿಂದೆ ನೀಡಿದ್ದ ಶಿಕ್ಷೆಯನ್ನು ಪುನರುಚ್ಚರಿಸಿತ್ತು. ಈ ಆದೇಶದ ವಿರುದ್ಧ ನಾಯಕ್ ಅಪರ ನ್ಯಾಯಾಲಯಕ್ಕೆ ಅಪೀಲು ಸಲ್ಲಿಸಿದ ತರುವಾಯ, ಎಮ್.ಎ. ನಂಬ್ರ 8/21 ರಲ್ಲಿ ಸುದೀರ್ಘವಾದ ವಾದ-ವಿವಾದ ನಡೆದು ಅಪರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಕೆ  ನಾಗೇಶ್ ಮೂರ್ತಿ ಯವರು ದಿನಾಂಕ: 22-03-2022 ರಲ್ಲಿ ನಾಯಕ್ ರವರ ಅಪೀಲಿನಲ್ಲಿ ನಿಜಾಂಶವಿಲ್ಲವೆಂದು ತೀರ್ಪಿತ್ತು ತನಿಖಾ ನ್ಯಾಯಾಲಯ ನೀಡಿದ ಶಿಕ್ಷೆಯನ್ನು ಎತ್ತಿ ಹಿಡಿದು ಅಪೀಲು ವಜಾ ಮಾಡಿದ್ದರು.


ಎರಡೂ ನ್ಯಾಯಾಲಯಗಳಲ್ಲಿ ಸೋಮನಾಥ ನಾಯಕ್ ರವರು ತಪ್ಪಿತಸ್ಥರೆಂದು ರುಜುವಾತಾದಂತೆ ಬೆಳ್ತಂಗಡಿಯ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಸತೀಶ ಕೆ.ಜಿ ಯವರು ದಿನಾಂಕ: 31-03-2022  ರಂದು, ಪ್ರತಿವಾದಿ ಈಗಲೂ ಹೆಗ್ಗಡೆಯವರ ವಿರುದ್ಧ ಮಾಡುತ್ತಿರುವ ಆರೋಪಗಳನ್ನು ಗಮನಿಸಿ ಮತ್ತು ನ್ಯಾಯಾಲಯದ ಘನತೆಯನ್ನು ಎತ್ತಿ ಹಿಡಿಯುವ ಉದ್ದೇಶದಿಂದ ಸೋಮನಾಥ ನಾಯಕ್ ವಿರುದ್ಧ ದಸ್ತಗಿರಿ ವಾರೆಂಟ್ ಹೊರಡಿಸಿ ಅವರನ್ನು ಕಸ್ಟಡಿಗೆ ತೆಗೆದುಕೊಂಡು ಬಂಧಿಖಾನೆಯಲ್ಲಿರಿಸಬೇಕೆಂದು ಆದೇಶ ಹೊರಡಿಸಿರುತ್ತಾರೆ. ಕ್ಷೇತ್ರದ ಪರವಾಗಿ ಬೆಳ್ತಂಗಡಿಯ ನ್ಯಾಯವಾದಿಗಳಾದ ರತ್ನವರ್ಮ ಬುಣ್ಣು ಹಾಗೂ ಬದರಿನಾಥ ಸಂಪಿಗೆತ್ತಾಯ ವಾದಿಸಿದ್ದರು. 


hit counter

0 Comments

Post a Comment

Post a Comment (0)

Previous Post Next Post