ಅಂಬಿಕಾದಲ್ಲಿ ಸೇತುಬಂಧ ತರಗತಿ ಪ್ರಾರಂಭ

Upayuktha
0

ಪುತ್ತೂರು: ದ್ವಿತೀಯ ಪಿಯುಸಿ ಎನ್ನುವುದು ವಿದ್ಯಾರ್ಥಿ ಜೀವನದ ಭವಿಷ್ಯ ನಿರ್ಧರಿಸುವ ಪ್ರಮುಖ ಘಟ್ಟ. ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ. ಗುರಿ ತಲುಪಲು ಸಾಧನೆ ಅಗತ್ಯ. ಪ್ರಥಮ ಪ್ರಯತ್ನದಲ್ಲೇ ವೈದ್ಯಕೀಯ, ತಾಂತ್ರಿಕ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಫಲರಾಗಿ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಾಗಲಿ ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಾಗಲಿ ಪ್ರವೇಶ ಪಡೆದು ಉತ್ತಮ ಭವಿಷ್ಯ ರೂಪಿಸಿ ಸತ್ಪ್ರಜೆಗಳಾಗಿ. ಉಪನ್ಯಾಸಕರು ನಿಮಗೆ ಉತ್ತಮ ರೀತಿಯಲ್ಲಿ ಮಾರ್ಗದರ್ಶನ ಮಾಡುತ್ತಾರೆ. ನಿಮ್ಮ ಕನಸು ನನಸಾಗಲಿ ಎಂದು ನಟ್ಟೋಜ ಫೌಂಡೇಶನ್ ಟ್ರಸ್ಟ್‍ನ ಕೋಶಾಧಿಕಾರಿ ರಾಜಶ್ರೀ ನಟ್ಟೋಜ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯದ ಪ್ರಥಮ ಪಿಯುಸಿಯಿಂದ ದ್ವಿತೀಯ ಪಿಯುಸಿಗೆ ಪ್ರವೇಶಿಸುವ ವಿದ್ಯಾರ್ಥಿಗಳಿಗೆ ಬೇಸಿಗೆ ರಜಾ ದಿನಗಳಲ್ಲಿ ನಡೆಸಲ್ಪಡುವ ಸೇತುಬಂಧ ತರಗತಿಗಳ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷರಾಗಿ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


ಡಾ. ಶ್ರುತಕೀರ್ತಿರಾಜ್ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ವಿಧ್ಯುಕ್ತವಾಗಿ ಉದ್ಘಾಟಿಸಿದರು. ನಂತರ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮವನ್ನು ಅವರು ನಡೆಸಿಕೊಟ್ಟರು. 


ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಅತಿಥಿಗಳನ್ನು ಸ್ವಾಗತಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾರ್ಥಿನಿಯರಾದ ವಿಧಾತ್ರಿ, ವೈಷ್ಣವಿ, ಅನಘ, ಶರಧಿ ಪ್ರಾರ್ಥಿಸಿದರು. ಉಪನ್ಯಾಸಕಿ ರಮ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top