|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸಾಹಿತಿ ಡಾ.ಶ್ರೀಧರ ಎಚ್.ಜಿ. ಅವರಿಗೆ ಪ್ರೊ.ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ

ಸಾಹಿತಿ ಡಾ.ಶ್ರೀಧರ ಎಚ್.ಜಿ. ಅವರಿಗೆ ಪ್ರೊ.ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ



ಪುತ್ತೂರು: ಕಲಬುರುಗಿಯ ಪ್ರೊ.ಮಲ್ಲೇಪುರಂ ಸಾಂಸ್ಕೃತಿಕ ಪ್ರತಿಷ್ಟಾನವು ಕೊಡಮಾಡುವ 2021ನೇ ಸಾಲಿನ ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿಗೆ ಪುತ್ತೂರಿನ ಸಾಹಿತಿ, ಹಿರಿಯ ಕನ್ನಡ ಪ್ರಾಧ್ಯಾಪಕ ಡಾ. ಶ್ರೀಧರ ಎಚ್.ಜಿ. ಆಯ್ಕೆಯಾಗಿದ್ದಾರೆ.


ಪ್ರಶಸ್ತಿಯು ಹತ್ತು ಸಾವಿರ ನಗದು, ಪ್ರಶಸ್ತಿ ಫಲಕ ಹಾಗೂ ಪ್ರಮಾಣ ಪತ್ರವನ್ನು ಒಳಗೊಂಡಿದೆ. ಈ ಕುರಿತಾಗಿ ಪ್ರತಿಷ್ಟಾನದ ಅಧ್ಯಕ್ಷ ಡಾ.ಶ್ರೀಶೈಲ ನಾಗರಾಳ ಹಾಗೂ ಗೌರವ ಕಾರ್ಯದರ್ಶಿ ಡಾ.ಎಂ.ಬಿ.ಕಟ್ಟಿ ಅಧಿಕೃತ ಘೋಷಣೆ ಮಾಡಿರುತ್ತಾರೆ. ಡಾ.ಶ್ರೀಧರ್ ಅವರ ಇತ್ತೀಚೆಗಿನ ಕಾದಂಬರಿ ‘ಚಪಡ’ ಪ್ರಶಸ್ತಿ ದೊರಕುವಲ್ಲಿ ಪ್ರಮುಖ ಪರಿಣಾಮ ಬೀರಿದೆ.


ಡಾ.ಶ್ರೀಧರ ಎಚ್.ಜಿ : ಇವರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮುಂಡಿಗೆಹಳ್ಳದವರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸಿರಿವಂತೆಯಲ್ಲಿ ಮುಗಿಸಿ, ನಂತರ ಸಾಗರದಲ್ಲಿ ಹೈಸ್ಕೂಲು, ಪದವಿಪೂರ್ವ ಶಿಕ್ಷಣ ಮತ್ತು ಅಲ್ಲಿನ ಲಾಲ್ ಬಹದ್ದೂರ್ ಕಾಲೇಜಿನಿಂದ ಬಿ.ಎ ಪದವಿಯನ್ನು ಪಡೆದರು. ಮೈಸೂರು ವಿಶ್ವÀವಿದ್ಯಾನಿಲಯದಿಂದ ಕನ್ನಡ ಎಂ.ಎ ಪದವಿಯನ್ನು ಪ್ರಥಮ ರ್ಯಾಂಕ್ ಹಾಗೂ ಚಿನ್ನದ ಪದಕದೊಂದಿಗೆ  1986ರಲ್ಲಿ ಪೂರೈಸಿದರು. ಅದೇ ವರ್ಷ ಯುಜಿಸಿ ನಡೆಸುವ ಜೂನಿಯರ್ ರಿಸರ್ಚ್ ಫೆಲೋಶಿಪ್ ಪರೀಕ್ಷೆಯಲ್ಲೂ ಉತ್ತೀರ್ಣರಾದರು.


ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರಿ ಅವರ ಮಾರ್ಗದರ್ಶನದಲ್ಲಿ ‘ಪ್ರಾಚೀನ ಕನ್ನಡ ಸಾಹಿತ್ಯದಲ್ಲಿ ಯುದ್ಧ ಕಲೆ’ ಎಂಬ ವಿಷಯದ ಬಗೆಗೆ ಪ್ರೌಢ ಪ್ರಬಂಧ ಮಂಡಿಸಿ ಮೈಸೂರು ವಿಶ್ವವಿದ್ಯಾನಿಲಯದಿಂದ ಪಿಎಚ್‍ಡಿ ಪದವಿಯನ್ನು 1993ರಲ್ಲಿ ಪಡೆದುಕೊಂಡರು. 1987ರಿಂದ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ, ವಿಭಾಗ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.  


ಸಂಶೋಧನೆ, ಸಾಹಿತ್ಯ ವಿಮರ್ಶೆ,ಸಂಪಾದನೆ, ನಾಟಕ, ಕಾದಂಬರಿ, ಪಠ್ಯಪುಸ್ತಕ ರಚನೆ, ಸಂಘಟನೆ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರು, ಕಾಲೇಜು ವಿದ್ಯಾರ್ಥಿಗಳಿಗೆ ನಾಟಕವನ್ನು ನಿರ್ದೇಶಿಸುವ ಹವ್ಯಾಸವನ್ನೂ ಹೊಂದಿದ್ದಾರೆ. ರಾಜ್ಯ, ರಾಷ್ಟ್ರಮಟ್ಟದ ಹಲವು ವಿಚಾರಗೋಷ್ಟಿಗಳಲ್ಲಿ ಎಂಬತ್ತಕ್ಕೂ ಹೆಚ್ಚು ಪ್ರಬಂಧಗಳನ್ನು ಮಂಡಿಸಿದ್ದು, ಐವತ್ತಕ್ಕಿಂತಲೂ ಅಧಿಕ ಸಂಶೋಧನಾ ಪ್ರಬಂಧಗಳು ಪ್ರಕಟಗೊಂಡಿವೆ. ಹಂಪಿ ವಿಶ್ವವಿದ್ಯಾನಿಲಯದಿಂದ ಗುರುತಿಸಲ್ಪಟ್ಟಿರುವ ಸಂಶೋಧನಾ ಮಾರ್ಗದರ್ಶಕರಾಗಿರುವ ಡಾ.ಶ್ರೀಧರ ಎಚ್.ಜಿ. ಹಲವು ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿರುತ್ತಾರೆ. 


ಪುತ್ತೂರು ಕರ್ನಾಟಕ ಸಂಘದ ಕಾರ್ಯದರ್ಶಿಯಾಗಿ ಸುಮಾರು ಹತ್ತು ವರ್ಷಗಳ ಕಾಲ, ಕನ್ನಡ ಸಾಹಿತ್ಯ ಪರಿಷತ್ತಿನ ಪುತ್ತೂರು ಘಟಕದ ಗೌರವ ಕಾರ್ಯದರ್ಶಿಯಾಗಿ ಐದು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. 2002ರಿಂದ ಶಿವರಾಮ ಕಾರಂತ ಅಧ್ಯಯನ ಕೇಂದ್ರದ ಕಾರ್ಯದರ್ಶಿಯಾಗಿಯೂ, ಕಾಲೇಜಿನ ಕನ್ನಡ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ 2020ರವರೆಗೆ ಕಾಲೇಜಿನ ಆಂತರಿಕ ಭರವಸೆ ಕೋಶದ ಸಂಯೋಜಕರಾಗಿ ಕೆಲಸವನ್ನು ನಿರ್ವಹಿಸಿದ್ದು, ನ್ಯಾಕ್ ಸಮಿತಿಯ ಮೂರನೆಯ ಭೇಟಿಯಲ್ಲಿ ಕಾಲೇಜಿಗೆ ‘ಎ’ ಗ್ರೇಡ್ ಬರುವಲ್ಲಿ ವಿಶೇಷವಾಗಿ ಶ್ರಮಿಸಿದ್ದಾರೆ.   


ಡಾ.ಶ್ರೀಧರ ಎಚ್.ಜಿ. ಅವರು ವಿಮರ್ಶೆ ಹಾಗೂ ಸಂಶೋಧನಾ ಪ್ರಕಾರಗಳಲ್ಲಿ ಹನ್ನೊಂದು ಕೃತಿಗಳನ್ನು, ಎರಡು ಕಾದಂಬರಿಗಳನ್ನು, ಹದಿನಾರು ಸಂಪಾದಿತ ಕೃತಿಗಳನ್ನಲ್ಲದೆ ನಾಟಕವನ್ನೂ ರಚಿಸಿದ್ದಾರೆ. ವಿದ್ವತ್ ಪರಂಪರೆಯ ಕೊಂಡಿಯಾಗಿ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

0 Comments

Post a Comment

Post a Comment (0)

Previous Post Next Post