ಪುತ್ತೂರು: ಕರ್ನಾಟಕ ಶಿಕ್ಷಣ ಮಂಡಳಿಯವರು ನಡೆಸಿದ್ದ 2021-2022 ನೇ ಸಾಲಿನ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಪಾಣಾಜೆ ಸುಬೋಧ ಪ್ರೌಢಶಾಲೆಗೆ ಶೇಕಡಾ ನೂರು ಫಲಿತಾಂಶ ಲಭಿಸಿರುತ್ತದೆ. ಹೈಯರ್ ಗ್ರೇಡ್ ಪರೀಕ್ಷೆಗೆ ಹಾಜರಾದ 17 ವಿದ್ಯಾರ್ಥಿಗಳಲ್ಲಿ 6 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿ 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ.
ಲೋಯರ್ ಗ್ರೇಡ್ ಪರೀಕ್ಷೆಗೆ ಹಾಜರಾದ 6 ಮಂದಿ ವಿದ್ಯಾರ್ಥಿಗಳಲ್ಲಿ ಒಬ್ಬಳು ವಿದ್ಯಾರ್ಥಿನಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಉಳಿದ 5 ಮಂದಿ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶಾಲೆಗೆ ನೂರು ಶೇಕಡ ಫಲಿತಾಂಶ ಲಭಿಸಿರುತ್ತದೆ.
ವಿದ್ಯಾರ್ಥಿಗಳಿಗೆ ಶಾಲೆಯ ಚಿತ್ರಕಲಾ ಶಿಕ್ಷಕಿ ಶ್ರೀಮತಿ ಶಾರದಾ ಜಿ ಅವರು ಮಾರ್ಗದರ್ಶನ ನೀಡಿರುತ್ತಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ