ಫ್ರಾನ್ಸ್ : ಎಮ್ಯಾನುಯೆಲ್ ಮ್ಯಾಕ್ರನ್ ಫ್ರಾನ್ಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಸತತ ಎರಡನೇ ಬಾರಿ ಜಯಗಳಿಸಿದ್ದಾರೆ. ಮ್ಯಾಕ್ರನ್ ಶೇ.58.2ರಷ್ಟು ಮತಗಳನ್ನು ಪಡೆಯುವ ಮೂಲಕ ಮರೀನ್ ಲೆ ಪೆನ್ರನ್ನು ಸೋಲಿಸಿ 2ನೇ ಬಾರಿಗೆ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.
ಇಲ್ಲಿನ ಚಾಂಪ್ ಡಿ ಮಾರ್ಸ್ ಪಾರ್ಕ್ನಲ್ಲಿ ಬೃಹತ್ ಪರದೆಯಲ್ಲಿ ಅಂತಿಮ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಅವರ ಬೆಂಬಲಿಗರು ಪರಸ್ಪರ ಅಭಿನಂದಿಸಿದರು.
ಫ್ರಾನ್ಸ್ ಅಧ್ಯಕ್ಷರಾಗಿ ಮರು ಆಯ್ಕೆಯಾದ ಮ್ಯಾಕ್ರನ್ರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಟ್ವೀಟ್ ಮಾಡಿದ ಮೋದಿ, ಭಾರತ-ಫ್ರಾನ್ಸ್ ಕಾರ್ಯತಂತ್ರದ ಸಹಭಾಗಿತ್ವವನ್ನು ಇನ್ನು ಹೆಚ್ಚು ಶಕ್ತಿಯುತಗೊಳಿಸಲು ಒಟ್ಟಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಹೇಳಿದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ