||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಶಾಲೆಯಲ್ಲಿ ಕನ್ನಡ ಸಾಹಿತ್ಯಕ್ಕೆ ಹೆಚ್ಚಿನ ಆದ್ಯತೆ: ಡಾ. ಮಂಜುನಾಥ ರೇವಣ್ಕರ್

ಶಾಲೆಯಲ್ಲಿ ಕನ್ನಡ ಸಾಹಿತ್ಯಕ್ಕೆ ಹೆಚ್ಚಿನ ಆದ್ಯತೆ: ಡಾ. ಮಂಜುನಾಥ ರೇವಣ್ಕರ್
ಮಂಗಳೂರು: ಪಠ್ಯದ ಜೊತೆ ಇತರ ಪುಸ್ತಕಗಳನ್ನು ಓದುವ ಮೂಲಕ ಸಾಮಾನ್ಯ ಜ್ಞಾನ ವೃದ್ಧಿಸಿಕೊಳ್ಳಬೇಕು. ಇಂದು ಪುಸ್ತಕ ಓದುಗರ ಕೊರತೆ ಇದೆ. ಬರೀ ಪಠ್ಯ ಪುಸ್ತಕದ ಓದುವಿಕೆಯಿಂದ ಅಂಕಗಳೇನೂ ಸಿಗಬಹುದು ಆದರೆ ವ್ಯಕ್ತಿತ್ವದ ಪರಿಪೂರ್ಣತೆಗೆ ಇತರ ಪುಸ್ತಕಗಳನ್ನು ಮಕ್ಕಳು ಓದಲೇ ಬೇಕಾದ ಅನಿವಾರ್ಯತೆ ಇದೆ ಎಂದು ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ಕಾರ್ಯದರ್ಶಿ ಡಾ|| ಮುರಲೀ ಮೋಹನ್ ಚೂಂತಾರು ತಿಳಿಸಿದರು.


ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ಇಂದು (ಏ.7, ಗುರುವಾರ) ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಮತ್ತು ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ (ರಿ) ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಮಂಗಳೂರಿನ ಅತ್ತಾವರದಲ್ಲಿರುವ ಸರಕಾರಿ ಪ್ರೌಢ ಶಾಲೆ ಅತ್ತಾವರ ಇಲ್ಲಿನ ಗ್ರಂಥಾಲಯಕ್ಕೆ ಕನ್ನಡ ಆರೋಗ್ಯ ಜಾಗೃತಿ ಪುಸ್ತಕಗಳು ಹಾಗೂ ಸಾಮಾನ್ಯ ಜ್ಞಾನ ವೃದ್ಧಿಸುವ ಪುಸ್ತಕಗಳನ್ನು ಕೊಡುಗೆಯಾಗಿ ನೀಡಲಾಯಿತು. ಸುಮಾರು 200ಕ್ಕೂ ಹೆಚ್ಚು ಪುಸ್ತಕಗಳನ್ನು ಶಾಲಾ ಮುಖ್ಯೋಪಾಧ್ಯಾಯರಾದ ಶಿವಕುಮಾರ್ ಅವರಿಗೆ ಹಸ್ತಾಂತರಿಸಲಾಯಿತು.


ಮುಖ್ಯ ಶಿಕ್ಷಕ ಶಿವಕುಮಾರ್ ಮಾತನಾಡಿ ಶಾಲಾ ಗ್ರಂಥಾಲಯಕ್ಕೆ ಉತ್ತಮ ಪುಸ್ತಕಗಳ ಕೊರತೆ ಇದ್ದು, ತಕ್ಷಣವೇ ವಿಷಯ ತಿಳಿದು ಸ್ವಂದಿಸಿದ ಕಸಾಪ ಮಂಗಳೂರು ಘಟಕದ ಪದಾಧಿಕಾರಿಗಳನ್ನು ಕೊಂಡಾಡಿದರು.


ಕಸಾಪ ಮಂಗಳೂರು ಘಟಕದ ಅಧ್ಯಕ್ಷರಾದ ಶ್ರೀ ಡಾ|| ಮಂಜುನಾಥ್ ಎಸ್. ರೇವಣಕರ್ ಅವರು ಮಾತನಾಡಿ, ಮಂಗಳೂರು ತಾಲೂಕಿನ ಎಲ್ಲಾ ಕನ್ನಡ ಶಾಲೆಗಳಲ್ಲಿ ಕನ್ನಡ ಸಾಹಿತ್ಯದ ಚಟುವಟಿಕೆ ಚರ್ಚಿಸಲಾಗುವುದು ಮತ್ತು ಮಕ್ಕಳು ಕನ್ನಡದ ಬಗ್ಗೆ ಆಸಕ್ತಿ ಮೂಡಿಸುವ ಕಾರ್ಯಕ್ರಮವನ್ನು ನಿರಂತರವಾಗಿ ಮುಂದಿನ ದಿನಗಳಲ್ಲಿ ಕಸಾಪ ಮಂಗಳೂರು ಘಟಕ ಹಮ್ಮಿಕೊಳ್ಳಲಿದೆ ಎಂದು ನುಡಿದರು.


ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರಾದ ಪಿಲಿಪ್ ಆರ್ಥರ್ ಡಿ'ಸೋಜಾ, ಗಣೇಶ್, ಪ್ರಸನ್ನ ಕುಮಾರ್, ಶಿಕ್ಷಕಿಯರಾದ ಸುಚೇತಾ, ಯಶೋದ, ಲಿಲ್ಲಿ ಪಾಯನ್ ಉಪಸ್ಥಿತರಿದ್ದರು. ಸರಕಾರಿ ಪ್ರೌಢ ಶಾಲೆ ಅತ್ತಾವರ ಇದರ ಸುಮಾರು 60 ಮಂದಿ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ಪ್ರಸನ್ನ ಕುಮಾರ್ ವಂದನಾರ್ಪಣೆ ಮಾಡಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

0 Comments

Post a Comment

Post a Comment (0)

Previous Post Next Post