ಕಸಾಪ ಮಂಗಳೂರು ತಾಲೂಕು ಘಟಕದಿಂದ ಟಿ ಜಿ. ಮೂಡೂರ್ ಅವರಿಗೆ ಶ್ರದ್ಧಾಂಜಲಿ

Upayuktha
0

ಮಂಗಳೂರು: ವಯೋಸಹಜ ಅನಾರೋಗ್ಯದಿಂದ ನಿಧನರಾದ ಹಿರಿಯ ಸಾಹಿತಿ ಟಿ ಜಿ ಮೂಡೂರ್ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ವತಿಯಿಂದ ನಂತೂರಿನ ಭಾರತಿ ಕಾಲೇಜಿನಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯಲ್ಲಿ ನಡೆಯಿತು.


ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಸಲಹೆಗಾರರಾದ ವಸಂತ ಕುಮಾರ್ ಪೆರ್ಲರವರು ಮಾತನಾಡಿ ಟಿ ಜಿ ಮೂಡೂರ್ ರವರು ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅನನ್ಯ.ಅವರ ನಿಧನ ಸಾಹಿತ್ಯ ಕ್ಷೇತ್ರಕ್ಕಾದ ಬಹು ದೊಡ್ಡ ನಷ್ಟ ಎಂದರು. ಕಥೆ ಕವನ ನಾಟಕ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಕೈಯಾಡಿಸಿ ಪರಿಪೂರ್ಣ ಸಾಹಿತಿ ಅವರಾಗಿದ್ದರು ಎಂದು ನುಡಿದರು.


ಕನ್ನಡ ಸಾಹಿತ್ಯ ಪರಿಷತ್ತಿನ ಮಂಗಳೂರು ತಾಲೂಕು ಘಟಕದ ಅಧ್ಯಕ್ಷ ಡಾ. ಮಂಜುನಾಥ ರೇವಣ್ ಕರ್ ರವರು ಪುಷ್ಪಾಂಜಲಿಯನ್ನು ಸಮರ್ಪಿಸಿ ನುಡಿನಮನ ಸಲ್ಲಿಸಿದರು.


ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ.ಮುರಲೀ ಮೋಹನ ಚೂಂತಾರ್ ರವರು ಟಿ ಜಿ. ಮೂಡೂರ್ ರವರು ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ನುಡಿನಮನ ಸಲ್ಲಿಸಿದರು.ಅವರು ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಟ್ಟಾಳು ಆಗಿದ್ದರು ಎಂದು ಅಭಿಪ್ರಾಯಪಟ್ಟರು.


ಕಸಾಪ ಮಂಗಳೂರು ಘಟಕದ ಕಾರ್ಯದರ್ಶಿ ಗಣೇಶ್ ಪ್ರಸಾದ್ ಜೀ ಕೋಶಾಧಿಕಾರಿ ಸುಬ್ರಾಯ ಭಟ್ ಮತ್ತು ಇತರ ಪದಾಧಿಕಾರಿಗಳಾದ ಶ್ರೀಮತಿ ಸುಖಲಾಕ್ಷಿ, ಮುರಳೀಧರ್ ಮತ್ತು ಬೆನೆಟ್ ಅಮ್ಮನ್ನ ಪುಷ್ಪನಮನ ಸಲ್ಲಿಸಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top